ಸವಾಲುಗಳನ್ನು ಮೆಟ್ಟಿ ನಿಂತು ಮುನ್ನುಗ್ಗಿ

14 Dwd 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ವಿದ್ಯಾರ್ಥಿ ಜೀವನದಲ್ಲಿ ಸವಾಲುಗಳು ಸಹಜ. ಅವುಗಳನ್ನು ಮೆಟ್ಟಿ ನಿಲ್ಲುವ ಧೈರ್ಯ ಮಾಡಬೇಕು. ಸೋಲು ಗೆಲುವಿನ ಸೋಪಾನ ಹಂಚಿನಮನಿ ಕಾಲೇಜು ಸಂಸ್ಥಾಪಕ ಪಿ.ಆರ್. ಹಂಚಿನಮನಿ ಹೇಳಿದರು.

ನಗರದ ಶ್ರೀಮತಿ ವಿದ್ಯಾ ಪಿ. ಹಂಚಿನಮನಿ ಪಿಯುಸಿ ವಿಜ್ಞಾನ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ 2024- 25ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ರಾಜು ಕಡೇಮನಿ ಮಾತನಾಡಿ, ವಿದ್ಯಾರ್ಥಿಗಳು ಪ್ರಯತ್ನವನ್ನು ಬಿಡಬಾರದು ಎಂದರು.

2022- 23 ಮತ್ತು 2023- 24ನೇ ಸಾಲಿನಲ್ಲಿ ಸಿಇಟಿ, ಜೆಇಇ, ನೀಟ್ ಮತ್ತು ಬೋರ್ಡ್ ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ನಗದು ಹಾಗೂ ಪ್ರಶಸ್ತಿಪತ್ರ ನೀಡಿ ಸನ್ಮಾನಿಸಲಾಯಿತು. ಇತ್ತೀಚೆಗೆ ಜರುಗಿದ ವಿದ್ಯಾರ್ಥಿ ವೇತನ ಮತ್ತು ಪ್ರವೇಶ ಪರೀಕ್ಷೆಯ 10 ಫಲಾನುಭವಿಗಳಿಗೆ 2 ವರ್ಷಗಳ ವಸತಿ ಸಹಿತ ಉಚಿತ ಶಿಕ್ಷಣದ ವಾಗ್ದಾನಪತ್ರ ನೀಡಲಾ¬ತು. ಕ್ರೀಡೆಯಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.

ಸಂಸ್ಥೆಯ ಕಾರ್ಯದರ್ಶಿ ಮನೋಜ ಪಿ. ಹಂಚಿನಮನಿ, ಸಹ ಕಾರ್ಯದರ್ಶಿ ವರ್ಷಾ ಹಂಚಿನಮನಿ, ವಿದ್ವಾನ್ ನವೀನ್ ಭಟ್, ಪಾಲಕರು, ಉಪನ್ಯಾಸಕರು ಮತ್ತು ಸಿಬ್ಬಂದಿ ಇದ್ದರು. ಕಾವೇರಿ ಕೇವಟಿ ಸ್ವಾಗತಿಸಿದರು. ಆಯುಷ್ ಜೋಗಳೇಕರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net