

ನರಗುಂದ: ತಾಲೂಕಿನ ಕೊಣ್ಣೂರ ಗ್ರಾಮದ ವಿದ್ಯಾಚೇತನ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮ ಫೆ.15ರಂದು ಸಂಜೆ 5ಗಂಟೆಗೆ ಕೊಣ್ಣೂರಿನ ಅಣ್ಣಾ ಹಜಾರೆ ಸಭಾ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಕೊಣ್ಣೂರ ವಿರಕ್ತಮಠದ ಡಾ. ಶಿವಾನಂದ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ವಿದ್ಯಾ ಚೇತನ ಶಿಕ್ಷಣ ಸಮಿತಿ ಅಧ್ಯಕ್ಷ ಎಸ್.ಆರ್. ಕಿತ್ತೂರ ಅಧ್ಯಕ್ಷತೆ ವಹಿಸಲಿದ್ದು, ಬಾಪುಗೌಡ ತಿಮ್ಮನಗೌಡ್ರ, ಸುಮಿತ್ರಾ ಹುಣಸೀಮರದ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಿಇಒ ಡಾ. ಗುರುನಾಥ ಹೂಗಾರ, ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಫ್. ಮಜ್ಜಗಿ, ಸಿಆರ್‌ಪಿ ಸಂತೋಷ ತೂರನೂರ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.