ಬೈಪಡಿತ್ತಾಯ ದಂಪತಿಗೆ ವಿದ್ಯಾಮಾನ್ಯ ಯಕ್ಷಕಲಾ ಪ್ರಶಸ್ತಿ

WhatsApp_Image_2023-03-09_at_6.30.54_PM
Published on

ಉಡುಪಿ : ಪಲಿಮಾರು ಮಠದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಹೆಸರಿನಲ್ಲಿ ಶಿಷ್ಯ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ತೆಂಕುತಿಟ್ಟಿನ ಕಲಾವಿದ ದಂಪತಿ ಹರಿನಾರಾಯಣ ಬೈಪಡಿತ್ತಾಯ ಮತ್ತು ಲೀಲಾವತಿ ಬೈಪಡಿತ್ತಾಯ ಆಯ್ಕೆಯಾಗಿದ್ದಾರೆ.

ಏಪ್ರಿಲ್ 6 ರಂದು ಪಲಿಮಾರಿನಲ್ಲಿರುವ ಮೂಲ ಮಠದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಲಿದೆ. ಪ್ರಶಸ್ತಿಯು ರೂ. 50,00 ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ ಎಂದು ಪಲಿಮಾರು ಮಠದ ಪ್ರಕಟಣೆ ತಿಳಿಸಿದೆ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net