

ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಹಾಲಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಹಾಲಾಡಿ ವೃತ್ತ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದಿದೆ.
ಸಮಾರೋಪ ಸಮಾರಂಭದಲ್ಲಿ ತಂಡದ ನಾಯಕ 8ನೇ ತರಗತಿಯ ಸೃಜನ್ ಮಾರಿಗುಡ್ಡಿ ಮತ್ತು ಸಹ ಆಟಗಾರರಿಗೆ ಪಾರಿತೋಷಕ, ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ತರಬೇತಿ ನೀಡಿದ್ದರು. ಸಂಸ್ಥೆಯ ವಸತಿನಿಲಯದ ಪಾಲಕಿ ನಯನಾ ತಂಡದ ವ್ಯವಸ್ಥಾಪಕಿಯಾಗಿ ಕಾರ್ಯ ನಿರ್ವಹಿಸಿದ್ದರು.
ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯ ಪ್ರದೀಪ್ ಕೆ. ವಿಜೇತ ತಂಡದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.