ವಿದ್ಯಾರ್ಥಿಗಳ ನಡುವೆ ಸೌಹಾರ್ದ ಬೆಸೆಯುವ ಉದ್ದೇಶ : ಕೆ.ಸೀತಾರಾಮ ರೈ ಹೇಳಿಕೆ

freshers day
Published on

ಕಡಬ: ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸದಾಗಿ ಪದವಿ ತರಗತಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ಶನಿವಾರ ನಡೆಯಿತು.

ಇನ್ಫಾರ್ಮೇಶನ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಉದ್ಘಾಟಿಸಿ ಮಾತನಾಡಿ, ಹಳೆಯ ಮತ್ತು ಹೊಸ ವಿದ್ಯಾರ್ಥಿಗಳ ನಡುವೆ ಸೌರ್ದವನ್ನು ಏರ್ಪಡಿಸುವ ಕಾರ್ಯಕ್ರಮವಿದು. ವಿದ್ಯಾರ್ಥಿಗಳು, ಆಡಳಿತ ಮಂಡಳಿ ಒದಗಿಸಿಕೊಟ್ಟ ಸೌಲಭ್ಯಗಳನ್ನು ಬಳಸಿಕೊಂಡು ಪಾಲಕರಿಗೆ ಹಾಗೂ ಸಂಸ್ಥೆಗೆ ಉತ್ತಮ ಹೆಸರು ತರಬೇಕು ಎಂದರು.

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದು ಹೋದ ಸಮಯ ಮತ್ತೆ ಹಿಂದಿರುಗಲಾರದು. ಹಾಗಾಗಿ ಪದವಿ ಶಿಕ್ಷಣದ ಮೂರು ವರ್ಷಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಪ್ರಾಂಶುಪಾಲ ಡಾ.ನಾರಾಯಣ ಮೂರ್ತಿ ಕೆ.ಮತ್ತು ಉಪಪ್ರಾಂಶುಪಾಲ ಶೇಷಗಿರಿ ಎಂ.ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕಲ್ಪನಾ ಸ್ವಾಗತಿಸಿ, ಪ್ರಸ್ತುತಿ ವಂದಿಸಿದರು. ಫಾತಿಮತ್ ಸಝಾನ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net