ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ಅವಶ್ಯಕ: ಸವಣೂರು ಕೆ.ಸೀತಾರಾಮ ರೈ ಅಭಿಪ್ರಾಯ

New Project (1)
Published on

ಕಡಬ: ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಅವಶ್ಯಕ ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಹೇಳಿದರು.

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಬಂಟ್ವಾಳ ಡಿವೈಎಸ್ಪಿ ಎಸ್.ವಿಜಯ ಪ್ರಸಾದ್ ಮಾತನಾಡಿ, ಜೀವನದ ಪ್ರತಿಯೊಂದು ಕಾರ್ಯವು ಕಾನೂನುಬದ್ಧವಾದದ್ದು. ಅದನ್ನು ಅರಿತು ಬಾಳಿದಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.

ಆಲಂಕಾರು ಶ್ರೀ ದುಗಾರ್ಂಬಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ರೂಪಾ ಜೆ.ರೈ ಶುಭಹಾರೈಸಿದರು. ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿಗಳಾದ ಎನ್.ಸುಂದರ ರೈ ಸವಣೂರು, ರಶ್ಮಿ ಅಶ್ವಿನ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್.ಆಳ್ವ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಶಿಕ್ಷಕ ರಕ್ಷಕ ಸಂದ ಅಧ್ಯಕ್ಷೆ ಪುಷ್ಪಾವತಿ, ಉಪಪ್ರಾಂಶುಪಾಲ ಶೇಷಗಿರಿ ಎಂ. ಉಪಸ್ಥಿತರಿದ್ದರು.

ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಸ್ವಾತಿ ಸ್ವಾಗತಿಸಿದರು. ಪ್ರಾಂಶುಪಾಲೆ ಡಾ.ರಾಜಲಕ್ಷ್ಮೀ ಎಸ್.ರೈ ವಾರ್ಷಿಕ ವರದಿ ವಾಚಿಸಿದರು. ಪ್ರಥಮ ಬಿಸಿಎ ವಿದ್ಯಾರ್ಥಿಯಾದ ಮಹಮ್ಮದ್ ಅನೀಸ್ ಹಾಗೂ ದ್ವಿತೀಯ ಬಿ.ಎ. ವಿದ್ಯಾರ್ಥಿ ದೀಕ್ಷಿತ್ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಅಲೀಮತ್ ಸರಝಾನಾ ನಿರ್ವಹಿಸಿದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಲಾವಣ್ಯಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net