ನೈಸರ್ಗಿಕ ಸಂಪನ್ಮೂಲದ ಸಂರಕ್ಷಣೆ ನಮ್ಮ ಹೊಣೆ -ಸಹಾಯಕ ಅರಣ್ಯಸಂರಕ್ಷಣಾಧಿಕಾರಿ ಶ್ರೀಧರ್

yyyyyyyy
Published on



ಮಂಗಳೂರು : ಮರ ಗಿಡಗಳಿಂದ ದೊರೆಯುವ ಶುದ್ಧವಾದ ಗಾಳಿ,ಮಳೆಯಿಂದ ದೊರೆಯುವ ನೀರು ನಮಗೆ ಜೀವನಾಧಾರವಾಗಿದೆ.ಅದಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನೈಸರ್ಗಿಕ ಸಂಪನ್ಮೂಲದ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಸಹಾಯಕ ಅರಣ್ಯಸಂರಕ್ಷಣಾಧಿಕಾರಿ ಶ್ರೀಧರ್ ಹೇಳಿದರು.
ದೇರಳಕಟ್ಟೆಯ ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ವತಿಯಿಂದ ದ.ಕ. ಅರಣ್ಯ ಇಲಾಖೆ,ನೆಲ್ಲಿಗುಡ್ಡೆ ಪರಿಸರ ಅಧ್ಯಯನ ಕೇಂದ್ರ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮುಖ್ಯ
ಅತಿಥಿಯಾಗಿ ಮಾತನಾಡಿದ ಅವರು ಪರಿಸರವನ್ನು ಉಳಿಸಿ ಮುಂದಿನ ಜನಾಂಗದ ಒಳಿತಿಗಾಗಿ ಸಂರಕ್ಷಣೆ ಮಾಡುವ
ಹೊಣೆಗಾರಿಕೆಯನ್ನು ನಾವು ವಹಿಸಿಕೊಳ್ಳಬೇಕಾಗಿದೆ ಎಂದರು.
ಪರಿಸರ ಜಾಗೃತಿಗಾಗಿ ಶಾಲಾ ವಿದ್ಯಾರ್ಥಿಗಳಿಗೆ ಬಟ್ಟೆ ಚೀಲ ಮತ್ತು ಗಿಡಗಳನ್ನು ವಿತರಿಸಿದ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಮಾತನಾಡಿ ‘ಪರಿಸರ ಸಂರಕ್ಷಣೆ ಶಿಕ್ಷಣದ ಭಾಗವಾಗಬೇಕು ಎಂದರು.
ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ ಕೊಣಾಜೆ , ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಕೋಶಾಧಿಕಾರಿ ಮೋಹನ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ವಿದ್ಯಾರತ್ನ ಶಿಕ್ಷಣ ಸಂಸ್ಥೆ ಗಳ ಸಂಚಾಲಕಿ ಸೌಮ್ಯ ಆರ್. ಶೆಟ್ಟಿ, ಮುಖ್ಯೋಪಾಧ್ಯಾಯಿನಿ ನೈಯಿಮ್ ಹಮೀದ್ ಶೇಖ್, ದ.ಕ.ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಉಳ್ಳಾಲ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಧರ ಪೊಯ್ಯತಬೈಲ್ ಉಪಸ್ಥಿತರಿದ್ದರು. ದ.ಕ.ಜಿಲ್ಲಾ
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು.ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net