

ವಿಟ್ಲ: ವಿಟ್ಠಲ ಎಜ್ಯುಕೇಶನ್ ಸೊಸೈಟಿಗೆ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಕಡೆಯಿಂದ ದೊಡ್ಡ ಕೊಡುಗೆ ನೀಡಬೇಕೆಂಬ ಆಸೆ ದಿ.ಎಲ್.ಎನ್.ಕೂಡೂರು ಅವರದ್ದಾಗಿತ್ತು. ಉಚಿತ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸಹಕಾರಿಯಾಗುವ ‘ವಿಜಯವಾಣಿ ವಿದ್ಯಾರ್ಥಿ ಮಿತ್ರ‘ವನ್ನು ಬ್ಯಾಂಕ್ ಕಡೆಯಿಂದ ಪೂರೈಸಲಾಗುತ್ತಿದೆ. ಈ ಮೂಲಕ ಕೂಡೂರುರವರ ಆಸೆಯನ್ನು ಪೂರ್ಣಗೊಳಿಸಿದ್ದೇವೆ ಎಂದು ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಚ್.ಜಗನ್ನಾಥ ಸಾಲ್ಯಾನ್ ಹೇಳಿದರು.
ವಿಟ್ಠಲ ಎಜುಕೇಶನಲ್ ಸೊಸೈಟಿ ಅಧೀನದ ವಿಟ್ಠಲ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ನಿಂದ ನೀಡಲ್ಪಡುವ ‘ವಿಜಯವಾಣಿ ವಿದ್ಯಾರ್ಥಿ ಮಿತ್ರ’ ಸಾಂಕೇತಿಕವಾಗಿ ವಿತರಿಸಿ ಮಾತನಾಡಿದರು.
ವಿಟ್ಲ ಅರಮನೆಯ ಬಂಗಾರು ಅರಸರು, ನಿವೃತ್ತ ಪ್ರಾಂಶುಪಾಲ ಅನಂತಕೃಷ್ಣ ಹೆಬ್ಬಾರ್, ಉದ್ಯಮಿ ಸುಬ್ರಾಯ ಪೈ, ವಿಟ್ಠಲ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಉಪಾಧ್ಯಕ್ಷ ಅಲಾನ್ಸ್ ಸಿಲ್ವೆಸ್ಟರ್ ಮಸ್ಕರೇನಸ್, ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೆ.ವಿ., ಬ್ಯಾಂಕ್ ಉಪಾಧ್ಯಕ್ಷ ಮನೋರಂಜನ್ ಕೆ.ಆರ್, ಆಡಳಿತ ಮಂಡಳಿ ಸದಸ್ಯರಾದ ಜಯಂತಿ ಎಚ್. ರಾವ್, ಶುಭಲಕ್ಷ್ಮೀ, ಕೇಶವ, ದಿವಾಕರ ವಿ., ಭಾಸ್ಕರ್ ಶೆಟ್ಟಿ, ರಾಮದಾಸ ಶೆಣೈ, ಮೋಹನ್ ಕೆ.ಎಸ್., ಸತೀಶ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ., ಪಿ.ಯು ಕಾಲೇಜು ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಪ್ರೌಢಶಾಲೆ ಮುಖ್ಯ ಶಿಕ್ಷಕ ಕಿರಣ್‌ಕುಮಾರ್ ಉಪಸ್ಥಿತರಿದ್ದರು.