ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ‘ವಿದ್ಯಾರ್ಥಿ ಮಿತ್ರ’ ಪೂರಕ

16 HANUR 3
Published on
  • ಚಾಮರಾಜನಗರ : ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಜಯವಾಣಿಯ ವಿದ್ಯಾರ್ಥಿ ಮಿತ್ರ ಪತ್ರಿಕೆ ಅನುಕೂಲವಾಗಿದೆ. ಹಾಗಾಗಿ, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವಂತೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಜವಾದ್ ಅಹಮದ್ ಸಲಹೆ ನೀಡಿದರು.

  • ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಜಯವಾಣಿಯ ವಿದ್ಯಾರ್ಥಿ ಮಿತ್ರ ಸಂಚಿಕೆಯನ್ನು ವಿತರಿಸಿ ಮಾತನಾಡಿದರು.

  • ಎಸ್ಸೆಸ್ಸೆಲ್ಸಿ ಜೀವನದ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಘಟ್ಟ. ಆದ್ದರಿಂದ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನು ಹೊಂದುವುದರ ಮೂಲಕ ಓದಿನ ಕಡೆ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ಉತ್ತಮ ಅಂಕ ಗಳಿಸಿ ಉನ್ನತ ಶಿಕ್ಷಣ ಪಡೆದು ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು. ಈ ದಿಸೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ವಿಜಯವಾಣಿ ವಿದ್ಯಾರ್ಥಿ ಮಿತ್ರ ಸಂಚಿಕೆಯನ್ನು ಹೊರತರುತ್ತಿದ್ದು, ಶೈಕ್ಷಣಿಕ ಸಾಧನೆಗೆ ಸಹಕಾರಿಯಾಗಿದೆ. ಆದ್ದರಿಂದ ಶಾಲೆಯಲ್ಲಿ ಪಾಠ ಬೋಧನೆಯ ಜತೆಗೆ ಪ್ರತಿಯೊಬ್ಬರೂ ವಿದ್ಯಾರ್ಥಿ ಮಿತ್ರ ಓದುವುದರಿಂದ ಪರೀಕ್ಷೆಗೆ ಅನುಕೂಲವಾಗಲಿದೆ. ಈ ಮೂಲಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿ ಶಾಲೆ ಹಾಗೂ ಗ್ರಾಮಕ್ಕೆ ಕೀರ್ತಿ ತರಬೇಕು ಎಂದು ತಿಳಿಸಿದರು. ಮುಖ್ಯ ಶಿಕ್ಷಕ ರಾಜೇಂದ್ರಸ್ವಾಮಿ ಮಾತನಾಡಿದರು. ಶಿಕ್ಷಕರಾದ ಮಂಜುನಾಥ್, ಮಹದೇವಪ್ರಸಾದ್, ನಾಗಿಣಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net