ವಿದ್ಯಾರ್ಥಿಗಳಿಗೆ ಜೀವನದಲ್ಲಿ ಗುರಿ ಅವಶ್ಯ

udp-21-vidyarthimitra
Published on

ಉಡುಪಿ: ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಕನಸು ಕಾಣಬೇಕು. ಗುರಿ ಮುಟ್ಟುವವರೆಗೆ ಪ್ರಯತ್ನ ಮಾಡಬೇಕು. ಇದಕ್ಕಾಗಿ ಉತ್ತಮ ವಿದ್ಯಾಭ್ಯಾಸ ಪಡೆಯಬೇಕು ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.

ಕಡಿಯಾಳಿ ಕಮಲಾ ಬಾಯಿ ಪ್ರೌಢಶಾಲೆಯಲ್ಲಿ ವಿಜಯವಾಣಿ ವಿದ್ಯಾರ್ಥಿಮಿತ್ರ ಪತ್ರಿಕೆ ವಿತರಿಸಿ ಮಾತನಾಡಿದರು. ಹಿಂದಿನ ಬಡತನ ಕಾಲದಲ್ಲಿ ವಿದ್ಯಾಭ್ಯಾಸಕ್ಕೆ ಹೆಚ್ಚಿನ ನೆರವು ಲಭಿಸುತ್ತಿರಲಿಲ್ಲ. ಪ್ರಸ್ತುತ ವಿದ್ಯಾರ್ಥಿಗಳಿಗೆ ಅನೇಕ ಸೌಲಭ್ಯಗಳು ಸಿಗುತ್ತಿದ್ದು, ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಮಿತ್ರ ಮೊದಲಾದ ಪತ್ರಿಕೆಗಳನ್ನು ಓದಿ ಪ್ರತಿಭಾವಂತರಾಗಬೇಕು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದು ಹೇಳಿದರು.

ಮುಖ್ಯೋಪಾಧ್ಯಾಯ ಜಗದೀಶ್​ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಶಿಕ್ಷಕಿ ವಿಜಯಲಕ್ಷಿ$್ಮ ಉಪಸ್ಥಿತರಿದ್ದರು. ಪತ್ರಕರ್ತ ಗೋಪಾಲಕೃಷ್ಣ ಪಾದೂರು ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net