ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿ ಮಿತ್ರ ಸಹಕಾರಿ

VIDYARTHI MITRA
Published on

ರಟ್ಟಿಹಳ್ಳಿ: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಯಶಸ್ಸಿಗೆ ಶಿಕ್ಷಕರ ಮಾರ್ಗದರ್ಶನ ಅವಶ್ಯವಾಗಿರುತ್ತದೆ. ವಿಜಯವಾಣಿ ವಿದ್ಯಾರ್ಥಿ ಮಿತ್ರ ಪತ್ರಿಕೆ ಸ್ಪರ್ಧಾತ್ಮಕ ಪರೀಕ್ಷೆಗಳ ಕೈಪಿಡಿ, ಮಾರ್ಗದರ್ಶನ ಮತ್ತು ಹಲವಾರು ಶೈಕ್ಷಣಿಕ ಮಾಹಿತಿ ಒಳಗೊಂಡಿದ್ದು, ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ ಎಂದು ಗುತ್ತಿಗೆದಾರ ನಾಗನಗೌಡ ಕೋಣ್ತಿ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಮಿತ್ರ ಪತ್ರಿಕೆ ವಿತರಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಮಿತ್ರ ಪತ್ರಿಕೆಯಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ವಿಷಯವಾರು ಮಾದರಿ ಪ್ರಶ್ನೆಪತ್ರಿಕೆಗಳು ಮತ್ತು ವಿಷಯಕ್ಕೆ ಸಂಬಂಧಿಸಿದ ಮಾಹಿತಿ ಲಭ್ಯವಿರುತ್ತದೆ. ನಿತ್ಯ ವಿದ್ಯಾರ್ಥಿಗಳು ಪಠ್ಯದ ವಿಷಯದೊಂದಿಗೆ ಪತ್ರಿಕೆ ಒದುವುದರಿಂದ ಹೆಚ್ಚಿನ ಅಂಕ ಪಡೆಯಲು ನೆರವಾಗುತ್ತದೆ ಎಂದರು.

ಯೋಗ ದಿನಾಚರಣೆ ನಿಮಿತ್ತ ವಿದ್ಯಾರ್ಥಿಗಳಿಗೆ ಸೂರ್ಯ ನಮಸ್ಕಾರ, ಯೋಗದ ಭಂಗಿಗಳನ್ನು ತಿಳಿಸಿ, ಉಪಯುಕ್ತ ಮಾಹಿತಿ ನೀಡಲಾಯಿತು. ಪ್ರಾಚಾರ್ಯ ಡಿ. ರಮೇಶ ಮಾತನಾಡಿದರು.

ಹಿರಿಯ ಶಿಕ್ಷಕ ಮಹೇಶ ಕೆರೂರು, ಉಪನ್ಯಾಸಕರಾದ ಗುಡ್ಡಚಾರಿ ಕಮ್ಮಾರ ಎಂ.ಎಚ್. ಬಣಕಾರ, ವಿಜಯಲಕ್ಷ್ಮೀ ಬಿ.ಕೆ., ಕಬೀರ ಕೆ.ಎ., ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net