

ಮುಳ್ಳೇರಿಯ: ಶೇಣಿ ಶ್ರೀಶಾರದಾಂಬಾ ವಿದ್ಯಾಸಂಸ್ಥೆಯಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ಕೇರಳ ಶಾಲಾ ಕಲೋತ್ಸವದಲ್ಲಿ ಮುಳ್ಳೇರಿಯದ ವಿದ್ಯಾಶ್ರೀ ಶಿಕ್ಷಣ ಕೇಂದ್ರ ಗಮನಾರ್ಹ ಸಾಧನೆ ಮಾಡಿ ಹಿರಿಯ ಪ್ರಾಥಮಿಕ ಕನ್ನಡ ವಿಭಾಗದಲ್ಲಿ ಚಾಂಪಿಯನ್‌ಷಿಪ್, ಕಿರಿಯ ಪ್ರಾಥಮಿಕ ಜನರಲ್ ಮತ್ತು ಹಿರಿಯ ಪ್ರಾಥಮಿಕ ಜನರಲ್ ವಿಭಾಗಗಳಲ್ಲಿ ರನ್ನರ್ ಅಪ್ ಸ್ಥಾನ ಮುಡಿಗೇರಿಸಿಕೊಂಡಿದೆ.
ಉಪಜಿಲ್ಲಾ ಕಲೋತ್ಸವದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲೆಯ ರಕ್ಷಕ ಶಿಕ್ಷಕ ಸಮಿತಿ ಸದಸ್ಯರು, ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಆಡಳಿತ ಸಮಿತಿ ಸದಸ್ಯರು ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳು ಶುಕ್ರವಾರ ಮುಳ್ಳೇರಿಯದಲ್ಲಿ ವಿಜಯೋತ್ಸವ ಮೆರವಣಿಗೆ ಮಾಡಿದರು.