ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆ ಪ್ರಥಮ

vidyavardhaka
ಥ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಪ್ರಶಸ್ತಿ ಪಡೆದುಕೊಂಡ ಶಿರ್ವ ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡ
Published on

ಶಿರ್ವ: ಉಡುಪಿಯ ಸೇಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ನಡೆದ ಉಡುಪಿ ವಲಯದ ಐಕ್ಸ್ ಅಂತರ್ ಶಾಲಾ ಬಾಲಕ ಮತ್ತು ಬಾಲಕಿಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಶಿರ್ವ ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

17 ವರ್ಷ ವಯೋಮಿತಿ ವಿಭಾಗದಲ್ಲಿ ಬಾಲಕಿಯರ ತಂಡ ಹಾಗೂ 14ರ ವಯೋಮಿತಿ ವಿಭಾಗದಲ್ಲಿ ಬಾಲಕರ ತಂಡ ಪ್ರಥಮ ಸ್ಥಾನಿಯಾಗಿದೆ. ಪಂದ್ಯಾವಳಿಗಳಲ್ಲಿ ಉಡುಪಿ ಜಿಲ್ಲೆಯ 16 ಸಂಸ್ಥೆಗಳ ಬಾಲಕಿಯರ ತಂಡಗಳು ಮತ್ತು 17 ಸಂಸ್ಥೆಗಳ ಬಾಲಕರ ತಂಡಗಳು ಭಾಗವಹಿಸಿದ್ದವು.
ಬಾಲಕಿಯರ ವಿಭಾಗದಲ್ಲಿ ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಾದ ನಂದಿತ ಉತ್ತಮ ಎಸೆತಗಾರ್ತಿ ಹಾಗೂ ಸೃಷ್ಟಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಗಳಿಸಿದ್ದಾರೆ. ಬಾಲಕರ ವಿಭಾಗದಲ್ಲಿ ಜೆಡನ್ ಲಾರೆನ್ಸ್ ಡೇಸಾ ಉತ್ತಮ ಎಸೆತಗಾರ ಹಾಗೂ ಮೊಹಮ್ಮದ್ ಝೈನ್ ಅಲೀಮ್ ಉತ್ತಮ ಹಿಡಿತಗಾರನಾಗಿ ಪ್ರಶಸ್ತಿ ಪಡೆದುಕೊಂಡರು. ವಿಜೇತ ತಂಡಗಳನ್ನು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ-ಅಧ್ಯಾಪಕೇತರ ವೃಂದ ಅಭಿನಂದಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net