ಸಚಿವರಿಂದ ಗ್ರೇಟರ್ ರಾಜಾಸೀಟು ಉದ್ಯಾನವನ ವೀಕ್ಷಣೆ

26adarshkdga4
Published on

ಮಡಿಕೇರಿ: ಗ್ರೇಟರ್ ರಾಜಾಸೀಟು ಉದ್ಯಾನವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್‌ರವರು ಗುರುವಾರ ವೀಕ್ಷಿಸಿದರು.


ಈ ಸಂದರ್ಭ ಮಾತನಾಡಿದ ಸಚಿವರು, ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ನಿಟ್ಟಿನಲ್ಲಿ ಗ್ರೇಟರ್ ರಾಜಾಸೀಟು ಅಭಿವೃದ್ಧಿ ಪಡಿಸಲಾಗಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ರಾಜಾಸೀಟು ವೀಕ್ಷಣೆಗೆ ಆಗಮಿಸುತ್ತಾರೆ. ಆ ನಿಟ್ಟಿನಲ್ಲಿ ಗ್ರೇಟರ್ ರಾಜಾಸೀಟು ಮತ್ತಷ್ಟು ಅಭಿವೃದ್ಧಿ ಪಡಿಸಲಾಗಿದೆ. ರಾಜಸೀಟು ಉದ್ಯಾನವನ ಮುಂದಿನ ದಿನಗಳಲ್ಲಿ ಇನ್ನಷ್ಟು ಆಕರ್ಷಣೀಯ ಸ್ಥಳ ಆಗಲಿದೆ ಎಂದು ತಿಳಿಸಿದರು.


ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net