ಜಿಲ್ಲಾಧಿಕಾರಿಯಿಂದ ಹಿಪ್ಪರಗಿ ಜಲಾಶಯ ವೀಕ್ಷಣೆ

Viewing of Hipparagi Reservoir by Collector
ರಬಕವಿ/ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯವನ್ನು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ವೀಕ್ಷಿಸಿದರು. ಎಸಿ ಸಂತೋಷ ಕಾಮಗೊಂಡ ಇತರರಿದ್ದರು.
Published on

ರಬಕವಿ/ಬನಹಟ್ಟಿ : ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಪ್ರವಾಹ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಭೇಟಿ ನೀಡಿ ವೀಕ್ಷಿಸಿದರು.

ನಂತರ ಅವರು ಮಾತನಾಡಿ, ಅಧಿಕಾರಿಗಳು ಆಯಾ ಗ್ರಾಮಗಳಲ್ಲಿನ ಬೆಳವಣಿಗೆ ಬಗ್ಗೆ ನಿರಂತರ ಮಾಹಿತಿ ಪಡೆಯಬೇಕು ಎಂದರು.

ಜಲಾಶಯದಲ್ಲಿ 522.70 ಮೀ. ಎತ್ತರದಲ್ಲಿ ನೀರಿದ್ದು, ಒಳ ಹಾಗೂ ಹೊರ ಹರಿವಿನ ಪ್ರಮಾಣ 1.3 ಲಕ್ಷ ಕ್ಯೂಸೆಕ್ ಇದೆ.

ಸರ್ಕಾರಿ ಶಾಲೆಗೆ ಭೇಟಿ : ಹಿಪ್ಪರಗಿಯ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗೆ ಭೇಟಿ ಮೂಲಸೌಕರ್ಯಗಳ ಕುರಿತು ಪರಿಶೀಲಿಸಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಶೌಚಗೃಹ ಸೇರಿದಂತೆ ಶಾಲೆಯ ಪ್ರತಿಯೊಂದು ಸ್ಥಳದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದ ಅವರು, ಕೆಲ ಮೂಲಸೌಕರ್ಯಗಳ ವ್ಯವಸ್ಥೆ ಮಾಡಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಆದೇಶಿಸಿದರು. ಉಪವಿಭಾಗಾಧಿಕಾರಿ ಸಂತೋಷ ಕಾಮಗೊಂಡ, ಜಮಖಂಡಿ ತಹಸೀಲ್ದಾರ್ ಸದಾಶಿವ ಮಕ್ಕೋಜಿ, ರಬಕವಿ-ಬನಹಟ್ಟಿ ತಹಸೀಲ್ದಾರ್ ಡಾ.ಡಿ.ಎಚ್. ಹೂಗಾರ, ನೀರಾವರಿ ಇಲಾಖೆ ಇಂಜಿನಿಯರ್ ವಿ.ಎಸ್.ನಾಯಕ, ಕಂದಾಯ ನಿರೀಕ್ಷಕ ಮಠಪತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net