ವಿಜಯ ಭಾರತ ಬಿಡುಗಡೆ

IMG_20240829_211213_471.jpg
Published on

ಹುಬ್ಬಳ್ಳಿ: ಇಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಮಹಾಮಂಡಳದ ವತಿಯಿಂದ ವಿಜಯ ಭಾರತ ಪುಸ್ತಕ ಬಿಡುಗಡೆ ಸಮಾರಂಭ ಆ. 31ರಂದು ಸಂಜೆ 5ಕ್ಕೆ ನಗರದ ಮೂರುಸಾವಿರ ಮಠ ಸಭಾಭವನದಲ್ಲಿ ಏರ್ಪಡಿಸಲಾಗಿದೆ.

ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಮಜೇಥಿಯಾ ಫೌಂಡೇಷನ್ ಚೇರ್ಮನ್ ಜಿತೇಂದ್ರ ಮಜೇಥಿಯಾ, ಶ್ರೀ ಜಿವ್ಹೇಶ್ವರ ಕೋಆಪ್ ಸೊಸೈಟಿ ನಿರ್ದೇಶಕ ಶ್ರೀನಿವಾಸ ಏಕಬೋಟೆ, ಬಣಗಾರ ಸಮಾಜ ಅಧ್ಯಕ್ಷ ಅನಿಲ ಕವಿಶೆಟ್ಟಿ ಅವರು ಪುಸ್ತಕ ಬಿಡುಗಡೆ ಮಾಡುವರು.

ಮಿಸ್ ಯೂನಿವರ್ಸ್ ಪಿಟೈಟ್ ಡಾ. ಶೃತಿ ಹೆಗಡೆ ಅವರನ್ನು ಸನ್ಮಾನಿಸಲಾಗುವುದು ಎಂದು ಸಾಧನಾ ಪೂಜಾರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net