

ಮಡಿಕೇರಿ: ಕೊಡಗು ಜಿಲ್ಲಾ ಸಶಸ್ತ್ರ ಪೊಲೀಸ್ ಹೆಡ್ ಕಾನ್ಸಟೇಬಲ್ ಎಂ.ಎನ್.ವಿಜಯ(೪೭ ವರ್ಷ) ಅವರು ಆ.೬ ರಂದು ನಿಧನಹೊಂದಿದ್ದಾರೆ.
ಪೊಲೀಸ್ ಹೆಡ್ ಕಾನ್ಸಟೇಬಲ್ ಎಂ.ಎನ್.ವಿಜಯ ಅವರು ಕೊಡಗು ಜಿಲ್ಲಾ ಸಶಸ್ತ್ರ ಪಡೆಯಲ್ಲಿ ೧೯೯೭ರ ಆ.೧ ರಂದು ಕರ್ತವ್ಯಕ್ಕೆ ನೇಮಕಗೊಂಡು ಸುಮಾರು ೨೮ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಇವರು ಮೈತ್ರಿ ಪೊಲೀಸ್ ಭವನ ಉಸ್ತುವಾರಿಯಾಗಿ ಹಾಗೂ ಪೊಲೀಸ್ ಬ್ಯಾಂಡ್ ಮಾಸ್ಟರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಆ.೬ ರಂದು ರಾತ್ರಿ ೯.೭ ಕ್ಕೆ ಹೃದಯಾಘಾತದಿಂದ ಮೃತಪಟ್ಟಿರುತ್ತಾರೆ ಎಂದು ಡಿಎಆರ್ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುರುವಾರ ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ಕೊಡಗು ಎಸ್ಪಿ ರಾಮರಾಜನ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಿಂಬಂದಿಗಳು ಆಸ್ಪತ್ರೆಗೆ ಆಗಮಿಸಿ ಸಂತಾಪ ಸೂಚಿಸಿದ್ದಾರೆ. ವಿಜಯ್ ಮೃತದೇಹಕ್ಕೆ ಮಡಿಕೇರಿಯಲ್ಲು ಸರ್ಕಾರಿ ಗೌರವ ಸೂಚಿಸಿದ ಬಳಿಕ ಮಡಿಕೇರಿಯಿಂದ ಹುಟ್ಟೂರು ಚಾಮರಾಜನಗರ ಜಿಲ್ಲೆಗೆ ಮೃತದೇಹವನ್ನು ಕಳುಹಿಸಿಕೊಡಲಾಯಿತು. ಮೃತ ವಿಜಯ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಅಗಲಿದ್ದಾರೆ.