

ಧಾರವಾಡ: ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಿ ಶಿಕ್ಷಕಿಯರ ತರಬೇತಿ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಓಲಂಪಿಯಾಡ್ ಯೋಗ ಸ್ಪರ್ಧೆಯ ಬಾಲಕರ ಯೋಗ ಸ್ಪರ್ಧೆ ವಿಭಾಗದಲ್ಲಿ ನಗರದ ಎನ್.ಎ.ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆ 8ನೇ ತರಗತಿಯ ವಿಜಯ ಅರಳಿಕಟ್ಟಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿ ಸಾಧನೆಗೆ ಶಾಲೆ ಉಸ್ತುವಾರಿ ಸದಸ್ಯ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ್ ಬ್ಯಾಕೋಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.