

ರಾಯಚೂರು: ನಗರದ ಎಸ್‌ಸಿಎಬಿ ಕಾನೂನು ಮಹಾವಿದ್ಯಾಲಯದಲ್ಲಿ ಕ್ರಿಕೆಟ್ ಪಟು ವಿಜಯರೆಡ್ಡಿ ಸ್ಮರಣಾರ್ಥ ಜು.23ರಂದು ಸಿಟಿ ಎಲೆವನ್ ಕ್ರಿಕೆಟ್ ಕ್ಲಬ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಎಸ್‌ಸಿಐಬಿ ಕಾನೂನು ಮಹಾವಿದ್ಯಾಲಯ, ವೀರ ಸಾರ್ವಕರ್ ಯೂತ್ ಅಸೋಸಿಯೇಷನ್ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಸಿಟಿ ಎಲೆವನ್ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಶರಣರೆಡ್ಡಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದರು. ರಕ್ತದಾನ ಶಿಬಿರಕ್ಕೆ ಶಾಸಕ ಡಾ.ಶಿವರಾಜ ಪಾಟೀಲ್ ಚಾಲನೆ ನೀಡಲಿದ್ದಾರೆ. ತಾರಾನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಾರಸಮಲ್ ಸುಖಾಣಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯಾಧ್ಯಕ್ಷ ವಿಜಯಕುಮಾರ ಪಾಟೀಲ್ ಶಾವಂತಗೇರ ನೇತೃತ್ವ ವಹಿಸುವರು. ಕಾಂಗ್ರೆಸ್ ಮುಖಂಡ ರವಿ ಬೋಸರಾಜು, ಆರ್‌ಡಿಎ ಮಾಜಿ ಅಧ್ಯಕ್ಷ ಕಡಗೋಲ ಆಂಜನೇಯ, ಅಂಬಾಪತಿ ಪಾಟೀಲ್, ಎಸ್‌ಸಿಎಬಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ವೈ.ಶ್ರೀಕಾಂತರಾವ್ ಭಾಗವಹಿಸುವರು ಎಂದು ತಿಳಿಸಿದರು. ಪದಾಧಿಕಾರಿಗಳಾದ ವಿಜಯಕುಮಾರ, ಸಂಜೀವನಾಯಕ, ರವಿರಾಜ ಇದ್ದರು.