

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಪತ್ನಿ ವಿಜಯಲಕ್ಷ್ಮೀ ನಗರದ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.
ಪತಿಗೆ ಜಾಮೀನು ದೊರೆತು ಅವರು ಪ್ರಕರಣದಿಂದ ಹೊರ ಬರುವಂತೆ ಆಗಲಿ ಎಂದು ಪ್ರಾರ್ಥಿಸಿ ವಿಜಯಲಕ್ಷ್ಮೀ ಅವರು ದೇಶದ ವಿವಿಧ ಶಕ್ತಿ ದೇವತೆಗಳ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ನವರಾತ್ರಿ ಸಂದರ್ಭದಲ್ಲಿ ಮಂಗಳವಾರ ಚಾಮುಂಡಿಬೆಟ್ಟಕ್ಕೆ ಆಗಮಿಸಿ ಶ್ರೀ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ನಟ ಧನ್ವೀರ್ ಅವರೊಂದಿಗೆ ಸಂಜೆ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿ ನಂತರ ಬೆಂಗಳೂರಿಗೆ ಹಿಂತಿರುಗಿದರು.