

ಹೊಸಪೇಟೆ: ಪ್ರಧಾನಿ ನರೇಂದ್ರ ಮೋದಿ ಅವರು ಏ.28 ರಂದು ವಿಜಯನಗರ ಜಿಲ್ಲೆಗೆ ಆಗಮಿಸಲಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರಿರಾಮಲು ಹಾಗೂ ಕೊಪ್ಪಳ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟೂರ್, ರಾಯಚೂರು ಅಭ್ಯರ್ಥಿ ರಾಜ ಅಮರೇಶ್ವರ ನಾಯಕ್ ಅವರ ಪರ ಪ್ರಚಾರ ನಡೆಸಲಿದ್ದಾರೆ.
ಅಂದು ಬೆಳಗ್ಗೆ 10ಕ್ಕೆ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನರೇಂದ್ರ ಮೋದಿ ಅವರು 2ನೇ ಬಾರಿಗೆ ಹೊಸಪೇಟೆಗೆ ಆಗಮಿಸುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ರಾಜ್ಯ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.
ಮೋದಿ ಆಗಮನ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದ್ದು, ಬಳ್ಳಾರಿ ಹಾಗೂ ಕೊಪ್ಪಳ ಅಭ್ಯಾರ್ಥಿಗಳನ್ಮು ಹೆಚ್ಚಿನ ಅಂತರದಿಂದ ಗೆಲ್ಲಿಸುವ ಸಂಕಲ್ಪ ಮಾಡಿದ್ದೇವೆ. ಮೋದಿ ಆಗಮನದ ನಿಮಿತ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಹಂದರದ ಪೂಜೆ ನೆರವೇರಿಸಲಾಯಿತು ಎಂದು ಎಂದು ಬಿಜೆಪಿ ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.