ಅಪರಿಚಿತ ಶವದ ಅಂತ್ಯಕ್ರಿಯೆ ನಡೆಸಿ ಮಾನವೀಯತೆ ಮೆರೆದ ಪೊಲೀಸರು..!

Vij Police 1
Published on

ವಿಜಯನಗರ: ಹೊಸಪೇಟೆ ನಗರದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿ ಶವವನ್ನು ಪೊಲೀಸರು ಗೌರವಯುತವಾಗಿ ಶವ ಸಂಸ್ಕಾರ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಹೊಸಪೇಟೆ ನಗರದಲ್ಲಿ 50 ವರ್ಷ ವ್ಯಕ್ತಿಯ ಅಪರಿಚಿತ ಶವವು ವಾಲ್ಮೀಕಿ ವೃತ್ತದ ಮೃತ್ಯುಂಜಯ ಆಸ್ಪತ್ರೆಯ ಬಳಿ ಪತ್ತೆಯಾಗಿತ್ತು. ಪೊಲೀಸರು ಮೃತ ದೇಹದ ಕುರಿತು ಪ್ರಕಟಣೆ ಮೂಲಕ ತಿಳಿಸಿದ್ದರು.

ಆದರೆ, ಯಾರು ಸಹ ಮುಂದೆ ಬಾರದ ಹಿನ್ನೆಲೆಯಲ್ಲಿ ಶವವನ್ನು ಪಟ್ಟಣ ಠಾಣೆಯ ಪೊಲೀಸರು, ಸಾರ್ವಜನಿಕ ರುದ್ರಭೂಮಿಯಲ್ಲಿ ಗೌರಯುತವಾಗಿ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ.

ಪೊಲೀಸರ ಈ ನಡೆಗೆ ಸಾರ್ವಜನಿಕರು ಸಹ ಭಾರಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಶವ ಪತ್ತೆಯಾಗಿರುವ ಕುರಿತು ನಗರದ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net