ಎಸ್ಟಿ ಸಮುದಾಯಕ್ಕೆ ಡಿಸಿಎಂ ಹುದ್ದೆ ನೀಡಲಿ

WITH PRESS
ವೈ.ದೇವೆಂದ್ರಪ್ಪ
Published on

ಹೊಸಪೇಟೆ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಎಸ್ಟಿ ಸಮುದಾಯಕ್ಕೆ ಡಿಸಿಎಂ ಹುದ್ದೆ ನೀಡಿದರೆ ಒಳ್ಳೆಯದು ಎಂದು ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿಗೆ ಡಿಸಿಎಂ ನೀಡಬೇಕು ಎನ್ನವ ವಿಚಾರಕ್ಕೆ ಸಂಬAಧಿಸಿದAತೆ ಪ್ರತಿಕ್ರಿಯಿಸಿ, ಸಿಎಂ, ಡಿಸಿಎಂ ಏನಾದರು. ಮಾಡಿಕೊಳ್ಳಿ. ಅವರ ಮನೆ ವಿಚಾರ ಮಾತಾಡೋದು ಸರಿಯಲ್ಲ. ಆದರೆ ಎಸ್ಟಿ ಸಮುದಾಯಕ್ಕೆ ಡಿಸಿಎಂ ಕೊಟ್ಟರೆ ಉತ್ತಮ ಎಂದರು.

ಬಿಜೆಪಿ ಹೈಕಮಾಂಡ್ ಗುರುತಿಸಿ ಟಿಕೆಟ್ ನೀಡಿದರೆ ಮತ್ತೊಮ್ಮೆ ಸ್ಪರ್ಧಿಸುತ್ತೇನೆ. ದೇಶದ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಯಾರಿಗೇ ಟಿಕೆಟ್ ನೀಡಿದರೂ ಅವರ ಪರವಾಗಿ ಕೇಂದ್ರ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.

ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಮಾಜಿ ಸಚಿವ ಶ್ರೀರಾಮುಲು ಅವರಿಗೆ ಕೊಟ್ಟರೂ ಅವರ ಪರ ಚುನಾವಣೆಯಲ್ಲಿ ಕೆಲಸ ಮಾಡುವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net