ವಿಜಯನಗರ ಜಿಲ್ಲೆಯಿಂದ 50 ಜನರು ಭಾಗಿ

ಹಗರಿಬೊಮ್ಮನಹಳ್ಳಿ ಬಿಜೆಪಿ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಂಜೀವರೆಡ್ಡಿ ಅಧ್ಯಕ್ಷತೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಪೂರ್ವಭಾವಿ ಸಭೆ ನಡೆಯಿತು.
ಹಗರಿಬೊಮ್ಮನಹಳ್ಳಿ ಬಿಜೆಪಿ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಂಜೀವರೆಡ್ಡಿ ಅಧ್ಯಕ್ಷತೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಪೂರ್ವಭಾವಿ ಸಭೆ ನಡೆಯಿತು.
Published on
ಹಗರಿಬೊಮ್ಮನಹಳ್ಳಿ: ರಾಜ್ಯದಲ್ಲಿ ಬಿಜೆಪಿ ಬಾವುಟ ಕಟ್ಟಲು ಹಿಂಜರಿಯುತ್ತಿದ್ದ ಕಾಲದಲ್ಲಿ ರಾಜ್ಯ ವ್ಯಾಪಿ ಸುತ್ತಾಡಿ ಊರೂರು ಅಲೆದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷ ಕಟ್ಟಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಜನಸಾಗರದ ನಡುವೆ ನಡೆಯಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಸಂಜೀವರೆಡ್ಡಿ ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಪೂರ್ವಸಿದ್ಧತೆ, ಬಿಜೆಪಿ ಪದಾಧಿಕಾರಿಗಳ ಸಭೆ ಶನಿವಾರ ಮಾತನಾಡಿದರು. ಅಭಿಮಾನೋತ್ಸವಕ್ಕೆ ವಿಜಯನಗರ ಜಿಲ್ಲೆಯಿಂದ 50 ಸಾವಿರ ಜನ ತೆರಳುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಕೀರ್ತಿ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಮುಖ್ಯಮಂತ್ರಿಯಾಗಿದ್ದಾಗ ಎಲ್ಲ ಸಮುದಾಯದವರು, ಮಠ-ಮಾನ್ಯಗಳು ಮತ್ತು ರೈತ ಅಭಿವೃದ್ಧಿಗೆ ಶ್ರಮಿಸಿದ ಶ್ರೇಯಸ್ಸು ಸಲ್ಲುತ್ತದೆ ಎಂದರು.
ಪುರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ವಿಪ್ ಜಾರಿ ಮಾಡಿದ್ದರೂ ಮತದಾನ ಪ್ರಕ್ರಿಯೆಯಲ್ಲಿ ಗೈರಾಗಿದ್ದ ಪಕ್ಷದ ಸದಸ್ಯರಿಗೆ ನೋಟಿಸ್ ನೀಡಲಾಗುವುದು. ಸದಸ್ಯರ ಪ್ರತಿಕ್ರಿಯೆ ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಇದು ಮುಂದೆ ತಪ್ಪು ಮಾಡುವವರಿಗೆ ಪಾಠವಾಗಲಿದೆ ಎಂದರು.
ಬಿಜೆಪಿ ಪರಾಜಿತ ಅಭ್ಯರ್ಥಿ ಬಲ್ಲಾಹುಣಸಿ ರಾಮಣ್ಣ ಮಾತನಾಡಿ, ಚಿತ್ರದುರ್ಗದಲ್ಲಿ ನಡೆಯುವ ಅಭಿಮಾನೋತ್ಸವದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರತಿ ಹಳ್ಳಿಯಿಂದ ವಾಹನ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಮಂಡಲ ಅಧ್ಯಕ್ಷ ಬೆಣಕಲ್ ಪ್ರಕಾಶ್, ನಗರ ಘಟಕದ ಅಧ್ಯಕ್ಷ ಮಂಜುನಾಥ ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕನಕಪ್ಪ, ಪುರಸಭೆ ಸದಸ್ಯರಾದ ಬಣಕಾರ ಸುರೇಶ್, ನಾಗರಾಜು ಜನ್ನು, ನವೀನ್ ಕುಮಾರ್, ಪ್ರಮುಖರಾದ ರವೀಂದ್ರ ಗೌಡ, ಸಂದೀಪ್ ಶಿವಮೊಗ್ಗ, ವೀರಯ್ಯಸ್ವಾಮಿ, ದಿವಾಕರಗೌಡ, ಗಜಾಪುರದ ಮಂಜುನಾಥ, ಜಿ.ಕಾಳೇಶ, ಮಲ್ಲಯ್ಯ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net