ರೈಲು ಡಿಕ್ಕಿಯಾಗಿ 8 ಎಮ್ಮೆ ಸಾವು

ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಎಮ್ಮೆಗಳು ಸ್ಥಳದಲ್ಲೇ ಸತ್ತಿರುವ ಘಟನೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿ ಗುರುವಾರ ನಡೆದಿದೆ. ಸ್ಥಳೀಯ ನಿವಾಸಿ ಕಾಳಪ್ಪ ಎಂಬುವರಿಗೆ ಸೇರಿದ ಎಮ್ಮೆಗಳು ಮೇಯಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ 8 ಎಮ್ಮೆಗಳು ಸ್ಥಳದಲ್ಲೇ ಪ್ರಾಣಬಿಟ್ಟಿವೆ.
Buffaloes
ರೈಲ್ವೆ ಹಳಿ ಮೇಲೆ ಸಾಗುತ್ತಿರುವ ಎಮ್ಮೆಗಳು ಮತ್ತು ಎದುರಿಗೆ ಬರುತ್ತಿರುವ ರೈಲು.k shreekantha
Published on: 

ಹೊಸಪೇಟೆ: ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಎಮ್ಮೆಗಳು ಸ್ಥಳದಲ್ಲೇ ಸತ್ತಿರುವ ಘಟನೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿ ಗುರುವಾರ ನಡೆದಿದೆ.

ಸ್ಥಳೀಯ ನಿವಾಸಿ ಕಾಳಪ್ಪ ಎಂಬುವರಿಗೆ ಸೇರಿದ ಎಮ್ಮೆಗಳು ಮೇಯಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ 8 ಎಮ್ಮೆಗಳು ಸ್ಥಳದಲ್ಲೇ ಪ್ರಾಣಬಿಟ್ಟಿವೆ. ತಮ್ಮ ಜೀವನೋಪಾಯಕ್ಕೆ ಆಸರೆಯಾಗಿದ್ದ ಎಮ್ಮೆಗಳು ಕಣ್ಣೆದುರೇ ಸಾವನ್ನಪ್ಪಿದ್ದನ್ನು ಕಂಡು ಮಾಲೀಕ ಕಾಳಪ್ಪ ಕಣ್ಣೀರಿಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ರೈಲ್ವೆ ಇಲಾಖೆ ಹಾಗೂ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net