ಪಿಯುಸಿ ಪರೀಕ್ಷೆಗೆ ಶೇ.95ರಷ್ಟು ವಿದ್ಯಾರ್ಥಿಗಳು ಹಾಜರು

ಹೊಸಪೇಟೆ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಭೇಟಿ ನೀಡಿ ಪರೀಕ್ಷಾ ಕೇಂದ್ರ ಪರಿಶೀಲಿಸಿದರು.
ಹೊಸಪೇಟೆ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಭೇಟಿ ನೀಡಿ ಪರೀಕ್ಷಾ ಕೇಂದ್ರ ಪರಿಶೀಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • 11914 ವಿದ್ಯಾರ್ಥಿಗಳ ನೊಂದಾಣಿ
  • 11338 ಹಾಜರು, 576 ಗೈರು
  • ವಿಜಯನಗರದಲ್ಲಿ ಮೊದಲ ದಿನ ಪಿಯುಸಿ ಪರೀಕ್ಷೆ
ಹೊಸಪೇಟೆ: ವಿದ್ಯಾರ್ಥಿ ಜೀವನದ ಮಹತ್ವದ ಹಾಗೂ ನಿರ್ಣಾಯಕ ಘಟ್ಟವಾಗಿರುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಶನಿವಾರ ಆರಂಭಗೊಂಡಿದ್ದು, ವಿಜಯನಗರ ಜಿಲ್ಲೆಯಲ್ಲಿ ಶನಿವಾರ ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ನಡೆದವು. 23 ಪರೀಕ್ಷಾ ಕ್ಷೇಂದ್ರಗಳಲ್ಲಿ 11338 ವಿದ್ಯಾರ್ಥಿಗಳು ಮೊದಲ ದಿನ ಕನ್ನಡ ಪರೀಕ್ಷೆ ಬರೆದರು.
ಪರೀಕ್ಷೆಗೆ ಜಿಲ್ಲೆಯಲ್ಲಿ ನೋಂದಣಿ ಪಡೆದಿದ್ದ 11914 ವಿದ್ಯಾರ್ಥಿಗಳ ಪೈಕಿ 11338 ವಿದ್ಯಾರ್ಥಿಗಳು ಹಾಜರಾಗಿದ್ದು, 576 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯ ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ಡಿಬಾರ್ ನಂತಹ ಪ್ರಕರಣಗಳು ನಡೆಯದೆ, ಯಾವುದೇ ಗೊಂದಲಗಳಿಲ್ಲದೆ ಬೆಳಿಗ್ಗೆ 10.15ಕ್ಕೆ ಆರಂಭವಾದ ಮೊದಲ ದಿನದ ಪರೀಕ್ಷೆ 1.30ಕ್ಕೆ ಸುಗಮವಾಗಿ ಮುಗಿದವು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net