ಮನುಕುಲದ ಒಳಿತಿಗೆ ಅಪಾರ ಕೊಡುಗೆ

ಕೂಡ್ಲಿಗಿ ತಾಲೂಕು ಕಚೇರಿಯಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರ ಜಯಂತಿ ಆಚರಿಸಲಾಯಿತು.
ಕೂಡ್ಲಿಗಿ ತಾಲೂಕು ಕಚೇರಿಯಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರ ಜಯಂತಿ ಆಚರಿಸಲಾಯಿತು.
Published on
ಕೂಡ್ಲಿಗಿ: ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶ ಸಾರಿದ ಶ್ರೀ ಯೋಗಿನಾರೇಯಣ ಯತೀಂದ್ರರು, ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ್ದರು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ್ ಹೇಳಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಬಲಿಜ ಸಮಾಜದ ಸಹಯೋಗದೊಂದಿಗೆ ಆಯೋಜಿಸಿದ್ದ ಶ್ರೀ ಯೋಗಿನಾರೇಯಣ ಯತೀಂದ್ರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ತ್ರಿಕಾಲ ಜ್ಞಾನಿಯಾಗಿದ್ದ ಕೈವಾರ ತಾತಯ್ಯ ಅವರು ಪ್ರಾಪಂಚಿಕ ಆಗು ಹೋಗುಗಳನ್ನು ಅರಿತು ಮನುಕುಲದ ಒಳಿತಿಗಾಗಿ ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ಬಲಿಜ ಸಮಾಜದ ಪ್ರಮುಖ ಎಂ.ಎಸ್.ತುಕಾರಾಮ್ ನಾಯ್ದು ಮಾತನಾಡಿ, ಕೈವಾರ ತಾತಯ್ಯ ಜಯಂತಿ ಆಚರಣೆ ಮೂಲಕ ಜನಸಾಮಾನ್ಯರಲ್ಲಿ ಸಾತ್ವಿಕತೆ ಹಾಗೂ ಅಧ್ಯಾತ್ಮ ಚಿಂತನೆಯತ್ತ ಒಲವು ಬೆಳೆಸಲು ಸಹಕಾರಿಯಾಗಿದೆ. ಕೈವಾರ ತಾತಯ್ಯ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಯೋಗಿ ನಾರೇಯಣ ಯತಿಂದ್ರರು ಪದ್ಯ, ಕೀರ್ತನೆ ಹಾಗೂ ಸ್ತೋತ್ರಗಳ ಮೂಲಕ ಸಾಹಿತ್ಯ ರೂಪದಲ್ಲಿ ಮುಂದೊಂದು ದಿನ ನಡೆಯಬಹುದಾಗ ಪಾಪ ಕೃತ್ಯಗಳ ಪ್ರಾಬಲ್ಯ, ಪ್ರಳಯ, ಸಂಪತ್ತಿನ ವಿನಾಶ, ಘೋರ ವೈಪರೀತ್ಯಗಳು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ತಿಳಿಸಿದ್ದು, ಅನೇಕ ಪವಾಡಗಳನ್ನೂ ಮಾಡಿದ್ದಾರೆ ಎಂದು ಹೇಳಿದರು.
ಉಪ ತಹಸೀಲ್ದಾರ್ ರಾಘವೇಂದ್ರ, ಶಿರಸ್ತೇದಾರ್ ಬಿ.ಮದ್ದಿಲೇಟಿ, ಬಲಿಜ ಸಮುದಾಯದ ಬಳಿಗಾರ ಬಸವರಾಜ, ಬಿ.ರುದ್ರೇಶ, ಲೇಪಾವತಿ, ಪೂಜಾರಿ ರಾಮಚಂದ್ರಪ್ಪ, ರಾಮಾಂಜನಿ, ಹೊಸಹಟ್ಟಿ ನರಸಿಂಹ, ತಾಲೂಕು ಕಚೇರಿ ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net