ಚುರುಕುಗೊಂಡ ಮುಂಗಾರು ಬಿತ್ತನೆ

ಕೊಟ್ಟೂರಿನ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳನ್ನು ಖರೀದಿಸಲು ಸಾಲು ನಿಂತಿರುವ ರೈತರು.
ಕೊಟ್ಟೂರಿನ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳನ್ನು ಖರೀದಿಸಲು ಸಾಲು ನಿಂತಿರುವ ರೈತರು.
Published on
ಕೊಟ್ಟೂರು: ತಾಲೂಕಿನಾದ್ಯಂತ ಸೋಮವಾರ ಮತ್ತು ಮಂಗಳವಾರ ಉತ್ತಮ ಮಳೆಯಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ರೈತರು ಬಿತ್ತನೆಬೀಜ ಹಾಗೂ ರಸಗೊಬ್ಬರ ಖರೀದಿಗೆ ಮುಂದಾಗಿದ್ದಾರೆ.
ತಾಲೂಕಿನಾದ್ಯಂತ 38,523 ಹೆಕ್ಟೇರ್ ನೀರಾವರಿ ಹಾಗೂ ಮಳೆಯಾಶ್ರಿತ ಕೃಷಿ ಭೂಮಿ ಇದ್ದು, ಈ ಪೈಕಿ 32,800 ಹೆಕ್ಟೇರ್ ಜಮೀನಿನಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಗುರಿ ಹೊಂದಲಾಗಿದೆ. ಜೋಳ 570 ಹೆಕ್ಟೇರ್, ಮೆಕ್ಕೆಜೋಳ 28298, ಸೂರ್ಯಕಾಂತಿ 550, ಶೇಂಗಾ 1680, ರಾಗಿ 2345, ನವಣೆ 122, ಹತ್ತಿ 30 ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ.
ಅವಶ್ಯಕ್ಕೆ ತಕ್ಕಂತೆ ಬಿತ್ತನೆಬೀಜ ಹಾಗೂ ರಸಗೊಬ್ಬರ ದಾಸ್ತಾನು ಇದ್ದು, ರೈತರಿಗೆ ತೊಂದರೆಯಾಗದಂತೆ ವಿತರಣಾ ಕಾರ್ಯಕ್ಕೆ ಕ್ರಮ ವಹಿಸಲಾಗಿದೆ. ಬಿತ್ತನೆಬೀಜ ಹಾಗೂ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಬಾರದು ಹಾಗೂ ಹೆಚ್ಚಿನ ಬೆಲೆಗೆ ಮಾರಾಟ ಮಾಡದಂತೆ ತಾಲೂಕು ಆಡಳಿತ ಇತ್ತೀಚಿಗೆ ಸಭೆ ಕರೆದು ಮಾರಾಟಗಾರರಿಗೆ ಸೂಚನೆ ನೀಡಿದೆ ಎಂದು ಸಹಾಯಕ ಕೃಷಿ ಅಧಿಕಾರಿ ಶ್ಯಾಮಸುಂದರ್ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net