ಜಿಲ್ಲೆಯಲ್ಲಿ ಒಟ್ಟು 2,49,638 ಎಕರೆ ಬಿತ್ತನೆ ಗುರಿ ಹೊಂದಲಾಗಿದ್ದು, ಮಳೆ ಕೊರತೆಯಿಂದಾಗಿ ಈವರೆಗೆ ಶೇ.30 ರಷ್ಟು ಮಾತ್ರ ಪ್ರಗತಿಯಾಗಿದೆ. ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ, ಜಿಲ್ಲೆಯಲ್ಲಿ 1,33,543 ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆ ಇದ್ದು, ಈಗಾಗಲೇ 74,538 ಮೆಟ್ರಿಕ್ ಟನ್ ದಾಸ್ತಾನು ಮಾಡಲಾಗಿದೆ. ಬೆಳೆ ಸಮೀಕ್ಷೆ ಮತ್ತು ವಿಮೆ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಪಾರದರ್ಶಕವಾಗಿ ಕೆಲಸ ಮಾಡಬೇಕು. ಲೋಪದೋಷ ಕಂಡುಬAದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ನೋಂದಾಯಿಸಲು ಜೋಳ, ತೊಗರಿ, ಮುಸುಕಿನ ಜೋಳ, ಹತ್ತಿ, ಈರುಳ್ಳಿ ಬೆಳೆಗಳಿಗೆ ಜು.31 ಮತ್ತು ಭತ್ತ, ರಾಗಿ, ನೆಲಗಡಲೆ ಸೇರಿದಂತೆ ಇತರೆ ಬೆಳೆಗಳಿಗೆ ಆ.14 ಕೊನೆಯ ದಿನಾಂಕವಾಗಿದೆ ಎಂದರು.