ಮಹನೀಯರ ತತ್ವ-ಸಿದ್ಧಾಂತ ಅಳವಡಿಸಿಕೊಳ್ಳಿ

ತೌಡೂರು ಎ ಎಂ ಕಾಡಮ್ಮ ವೀರಯ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕ ಮಂಜ್ಯಾನಾಯ್ಕ ಉದ್ಘಾಟಿಸಿದರು. ಶಿಕ್ಷಣ ಸಂಯೋಜಕ ಜೆ ತಿಪ್ಪೇಸ್ವಾಮಿ, ಮುಖ್ಯ ಶಿಕ್ಷಕಿ ಸೈಯದ್ ಮುಬೀನ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎನ್ ಜಿ ಮನೋಹರ್, ಶಿಕ್ಷಕರಾದ ನೇತ್ರಾವತಿ, ಶಬನ ಅಜ್ಮಿ, ಶರಣಮ್ಮ, ಸದಾನಂದ ನಾಯ್ಕ, ಬಸವರಾಜ, ರೇಷ್ಮಾ, ಬಾಬು ರಾಜೇಂದ್ರ, ಜಗದೀಶ, ಜಯಾನಾಯ್ಕ, ರಾಜ ನಾಯ್ಕ, ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ನಾವೆಲ್ಲರೂ
  • ಅನುಸರಿಸಬೇಕು
  • ನಿವೃತ್ತ
ಹರಪನಹಳ್ಳಿ: ವಿದ್ಯಾರ್ಥಿಗಳು ಸಮಾಜಮುಖಿ ಜೀವನದೊಂದಿಗೆ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ನಿವೃತ್ತ ಮುಖ್ಯ ಶಿಕ್ಷಕ ಮಂಜ್ಯಾನಾಯ್ಕ ತಿಳಿಸಿದರು.
ತೌಡೂರು ಗ್ರಾಮದ ಎ ಎಂ ಕಾಡಮ್ಮ ವೀರಯ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ 2015-16ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜೀವನದಲ್ಲಿ ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಎಲ್ಲವನ್ನು ಗಳಿಸಿಕೊಳ್ಳಲು ಸಾಧ್ಯ. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಎ.ಪಿ.ಜೆ. ಅಬ್ದುಲ್ ಕಲಾಂ ನಮ್ಮೆಲ್ಲರ ಬದುಕಿಗೆ ಆದರ್ಶ ವ್ಯಕ್ತಿಗಳಾಗಿದ್ದಾರೆ. ಅಂತಹವರ ತತ್ವ ಸಿದ್ಧಾಂಗಳನ್ನು ನಾವೆಲ್ಲರೂ ಅನುಸರಿಸಬೇಕು ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎನ್ ಜಿ ಮನೋಹರ್ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವ-ಸಿದ್ಧಾಂಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಾಧ್ಯ, ಸುಸಂಸ್ಕೃತ ಉತ್ತಮ ಸಮಾಜ ನಿರ್ಮಾಣದಲ್ಲಿ ಗುರು-ಶಿಷ್ಯರ ಪಾತ್ರ ಅಮೂಲ್ಯವಾಗಿದೆ ಎಂದರು.
ಶಿಕ್ಷಣ ಸಂಯೋಜಕ ಜೆ ತಿಪ್ಪೇಸ್ವಾಮಿ ಮಾತನಾಡಿದರು. ವಿದ್ಯಾರ್ಥಿಗಳಾದ ಅಶೋಕ ನೆಲಗೊಂಡನಹಳ್ಳಿ, ವಿಜಯ್ ಕುಮಾರ್, ಸುನೀಲ್ ಕುಮಾರ್, ಸಂದೀಪ್, ಹನುಮಂತಪ್ಪ, ದ್ಯಾವಮ್ಮ, ಅರ್ಚನಾ, ನೇತ್ರಾವತಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net