ಹಂಪಿಯಲ್ಲಿ ಆರಂಭವಾದ ಅಕ್ಕ ಕ್ಯಾಂಟಿನ್

ಹಂಪಿಯ ವಿಜಯ ವಿಠಲ ದೇಗುಲದ ಬಳಿ ಸಂಚಾರಿ ಅಕ್ಕ ಕ್ಯಾಂಟಿನ್‌ಗೆ ಜಿಪಂ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ ಚಾಲನೆ ನೀಡಿದರು. ಜಿಪಂ ಸಹಾಯಕ ಯೋಜನಾ ಅಧಿಕಾರಿ ಉಮೇಶ್, ಇಒ ಅಲಂ ಭಾಷಾ, ಜಿಪಂ ಅಧೀಕ್ಷಕ ನಾಗರಾಜ್, ಜಿಲ್ಲಾ ಯೋಜನಾ ವ್ಯವಸ್ಥಾಪಕ ಪ್ರಸನ್ನ, ಜಿಲ್ಲಾ ವ್ಯವಸ್ಥಾಪಕಿ ಕಲಾವತಿ ಇತರರಿದ್ದರು.
ಹಂಪಿಯ ವಿಜಯ ವಿಠಲ ದೇಗುಲದ ಬಳಿ ಸಂಚಾರಿ ಅಕ್ಕ ಕ್ಯಾಂಟಿನ್‌ಗೆ ಜಿಪಂ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ ಚಾಲನೆ ನೀಡಿದರು. ಜಿಪಂ ಸಹಾಯಕ ಯೋಜನಾ ಅಧಿಕಾರಿ ಉಮೇಶ್, ಇಒ ಅಲಂ ಭಾಷಾ, ಜಿಪಂ ಅಧೀಕ್ಷಕ ನಾಗರಾಜ್, ಜಿಲ್ಲಾ ಯೋಜನಾ ವ್ಯವಸ್ಥಾಪಕ ಪ್ರಸನ್ನ, ಜಿಲ್ಲಾ ವ್ಯವಸ್ಥಾಪಕಿ ಕಲಾವತಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ ಚಾಲನೆ
ಹೊಸಪೇಟೆ: ಹಂಪಿಯ ವಿಜಯವಿಠಲದ ಬಳಿ ಅಕ್ಕ ಕ್ಯಾಂಟಿನ್ ಆರಂಭಿಸಲಾಗುತ್ತಿದ್ದು, ಪ್ರವಾಸಿಗರಿಗೆ ಅನುಕೂಲ ಆಗಲಿದೆ ಎಂದು ಜಿಪಂ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ ತಿಳಿಸಿದರು.
ಜಿಲ್ಲಾ ಪಂಚಾಯಿತಿ, ಸಂಜೀವಿನಿ ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಹಂಪಿಯ ಶ್ರೀಜಗನ್ ಜ್ಯೋತಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಿಂದ ವಿಶ್ವವಿಖ್ಯಾತ ಹಂಪಿಯ ವಿಜಯ ವಿಠಲ ದೇಗುಲದ ಮುಂಭಾಗ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಚಾರಿ ಅಕ್ಕ ಕ್ಯಾಂಟಿನ್‌ನ್ನು ಬುಧವಾರ ಚಾಲನೆ ನೀಡಿ ಮಾತನಾಡಿದರು.
ವಿಶ್ವ ವಿಖ್ಯಾತ ಹಂಪಿಗೆ ದೇಶ ವಿದೇಶಿ ಪ್ರವಾಸಿಗರು ಹೆಚ್ಚಿನ ಪ್ರಮಾಣದಲ್ಲಿ ಭೇಟಿ ನೀಡುತ್ತಾರೆ. ಸ್ಮಾರಕಗಳ ವೀಕ್ಷಣೆ ಹಾಗೂ ದೇವರ ದರ್ಶನ ಪಡೆಯಲು ಬರುವ ಜನಸಾಮಾನ್ಯರಿಗೂ ಅನುಕೂಲ ಆಗುವಂತೆ ಒಲವಿನ ಊಟ ಸಿಗುವುದು ಕಷ್ಟ ಸಾಧ್ಯ. ವಿಜಯ ವಿಠಲ ದೇಗುಲದ ಮುಂಭಾಗದಲ್ಲಿ ಮೊಬೈಲ್ ಕ್ಯಾಂಟಿನ್ ವ್ಯವಸ್ಥೆ ಕಲ್ಪಿಸಲಾಗಿದೆ. ಜಗನ್ ಜ್ಯೋತಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ಹಂಪಿಯ ಶ್ರೀವೈಷ್ಣವಿ ಮಹಿಳಾ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ರುಚಿ ಶುಚಿಯಾದ ಉಪಹಾರ, ಊಟ ಸಿಗುತ್ತದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಇದರಿಂದಾಗಿ ಮೊಬೈಲ್ ಕ್ಯಾಂಟಿನ್‌ನಲ್ಲಿ ತೊಡಗಿರುವ ಗ್ರಾಮೀಣ ಭಾಗದ ಸ್ವಸಹಾಯ ಗುಂಪಿನ ಮಹಿಳೆಯರ ಕುಟುಂಬಗಳಿಗೆ ಹೆಚ್ಚಿನ ಆದಾಯ ವೃದ್ಧಿಯಾಗಿ ಆರ್ಥಿಕವಾಗಿ ಸದೃಢವಾಗಲು ಸಹಕಾರಿಯಾಗುತ್ತದೆ ಎಂದರು.
ಊಟಕ್ಕೆ ಬಳಸುವ ಎಲ್ಲಾ ಪರಿಕರಗಳು ಹಾಗೂ ಸಾಮಾಗ್ರಿಗಳನ್ನು ಸ್ವಚ್ಛವಾಗಿಡಬೇಕು. ಅಗತ್ಯ ಕ್ರಮಗಳನ್ನು ಅನುಸರಿಸಿ, ಉತ್ತಮ ಗುಣಮಟ್ಟದ ಸಾಮಗ್ರಿಗಳು ಹೊಂದಿದ್ದಲ್ಲಿ ಉತ್ತಮ ಗುಣಮಟ್ಟದ ಶುಚಿರುಚಿಯಾದ ಉಪಹಾರ ನೀಡುವಂತೆ ಮೊಬೈಲ್ ಕ್ಯಾಂಟಿನ್ ಅಡುಗೆ ಸಿಬ್ಬಂದಿಗಳಿಗೆ ಸೂಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net