

ಪ್ರಮುಖ ಮುಖ್ಯಾಂಶಗಳು
ಶನಿವಾರದಿಂದ ಮಾ.17 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ದತೆ ಕೈಗೊಂಡಿದೆ. ಪರೀಕ್ಷಾ ಪಾವಿತ್ರ‍್ಯತೆಗೆ ಧಕ್ಕೆಯಾಗದಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದರ ಜತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಮುಖ್ಯಸ್ಥರು ಹೊರತುಪಡಿಸಿ ಉಳಿದವರಿಗೆ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ.
14801 ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಗೆ ನೊಂದಣಿ ಆಗಿದ್ದಾರೆ. ಎರಡು ಪೂರ್ವ ಸಿದ್ದತೆ ಪರೀಕ್ಷೆಯಲ್ಲಿ ಶೇ.71ರಷ್ಟು ಫಲಿತಾಂಶ ಬಂದಿದೆ. 80ರಷ್ಟು ಫಲಿತಾಂಶ ಪಡೆಯುವ ಗುರಿ ಹೊಂದಿದ್ದೆವೆ. ಇಂದಿನಿAದ ಪರೀಕ್ಷೆ ಆರಂಭ ಆಗಲಿದ್ದು, ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಲಿದ್ದೇವೆ.