ಅಮರಶಿಲ್ಪಿ ಜಕಣಾಚಾರಿ ಮೇರು ವ್ಯಕ್ತಿತ್ವ

ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಿಸಲಾಯಿತು. ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಜಿಲ್ಲಾ ಕಚೇರಿ ತಹಸೀಲ್ದಾರ್ ಮೇಘಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಭಿಪ್ರಾಯ
ಹೊಸಪೇಟೆ: ಭಾರತದ ಶಿಲ್ಪಕಲೆಗೆ ಅತ್ಯಮೂಲ್ಯ ಕೊಡುಗೆ ನೀಡಿರುವ ಅಮರಶಿಲ್ಪಿ ಜಕಣಾಚಾರಿ ಅವರ ಕಲಾಚಾತುರ್ಯಕ್ಕೆ ಬೇಲೂರು, ಹಳೇಬೀಡಿನ ಸುಂದರ ಶಿಲ್ಪಗಳು ಸಾಕ್ಷಿಯಾಗಿ ನಿಂತಿವೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಶನಿವಾರ ಮತನಾಡಿದರು.
ಜಕಣಾಚಾರ್ಯರು ಶಿಲ್ಪಕಲಾ ಕ್ಷೇತ್ರದ ಶ್ರೀಮಂತಿಕೆಗೆ ನೀಡಿರುವ ಬಹುದೊಡ್ಡ ಕೊಡುಗೆಯನ್ನು ನವಪೀಳಿಗೆಗೆ ತಿಳಿಸಬೇಕಿದೆ. ಅವರ ಶಿಲ್ಪಕಲೆಗಳನ್ನು ಮುಂದಿನ ಜನಾಂಗಕ್ಕೂ ಬಳುವಳಿಯಾಗಿ ನೀಡಬೇಕಾದ ಮಹತ್ತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಜಕಣಾಚಾರ್ಯರು ಒಂದು ಸಮುದಾಯಕ್ಕೆ ಸೀಮಿತರಲ್ಲ; ಕಲಾಭಿರುಚಿ ಇರುವ ಸರ್ವ ಜನಾಂಗವೂ ಗೌರವವಿಸಬೇಕಾದ ಮೇರು ವ್ಯಕ್ತಿತ್ವ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net