ವಿಕಸಿತ ಭಾರತಕ್ಕೆ ಅಂಬೇಡ್ಕರ್ ತತ್ವಗಳು ದಾರಿದೀಪ

ಹೊಸಪೇಟೆಯಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ನೇತೃತ್ವದಲ್ಲಿ ಮೌನಚಾರಣೆ ನಡೆಯಿತು.
ಹೊಸಪೇಟೆಯಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ನೇತೃತ್ವದಲ್ಲಿ ಮೌನಚಾರಣೆ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಭಿಪ್ರಾಯ
\ಹೊಸಪೇಟೆ: ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಭಾರತ ದೇಶವನ್ನು ಅಭಿವೃದ್ದಿ ಮಾಡುವ ನಿಟ್ಟಿನಲ್ಲಿ ಅವರು ಭಾರತ ದೇಶಕ್ಕೆ ಬಹುದೊಡ್ಡ ಸಂವಿಧಾನದ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು.
ಅಂಬೇಡ್ಕರ್ ಅವರು ಭಾರತದ ಕಾನೂನು ಸುವ್ಯವಸ್ಥೆ, ಅಸ್ಪೃಶ್ಯತೆ ನಿವಾರಣೆ, ಪ್ರಜೆಗಳ ಮೂಲಭೂತ ಕರ್ತವ್ಯ, ಸಮಾನತೆ, ಶಿಕ್ಷಣ ಕ್ಷೇತ್ರ, ಇತರೆ ಹಲವು ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆಗಳು ಜೀವಂತವಾಗಿವೆ. ಅವರ ತತ್ವಗಳು ವಿಕಸಿತ ಭಾರತದ ಗುರಿಗಳಿಗೆ ದಾರಿದೀಪವಾಗಿವೆ ಎಂದರು.
ಜಿಪಂ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಶಾ, ಎಸ್ಪಿ ಎಸ್.ಜಾಹ್ನವಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net