ಮತದಾರರನ್ನು ಮಾತ್ರ ಪಟ್ಟಿಯಲ್ಲಿ ಉಳಿಸಿ, ಅರ‍್ಹರನ್ನು ಕೈಬಿಡುವುದು ಮತ್ತು ಸಂಪರ‍್ಣ ನಿಯಮಬದ್ಧವಾಗಿ ಪಾರರ‍್ಶಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಈ ವಿಶೇಷ ಸಮಗ್ರ ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು, ತೆಗೆದುಹಾಕಲು ಹಾಗೂ ಪ್ರೊಜಿನಿ ಮ್ಯಾಪಿಂಗ್ ಮಾಡಲು ಜೂ.16 ರವರೆಗೆ ಅಂತಿಮ ಅವಕಾಶವಿರುತ್ತದೆ. ಆ ಬಳಿಕ ಪರ‍್ಟಲ್ ಫ್ರೀಜ್ ಆಗಲಿದ್ದು, ಕರಡು ಮತದಾರರ ಪಟ್ಟಿ ಪ್ರಕಟವಾಗುವವರೆಗೆ ಯಾವುದೇ ಬದಲಾವಣೆಗಳಿಗೆ ಆಸ್ಪದವಿರುವುದಿಲ್ಲ. ಜೂ.20 ರಿಂದ 29 ರವರೆಗೆ ಮತಗಟ್ಟೆ ಅಧಿಕಾರಿಗಳಿಗೆ ಅಗತ್ಯ ತರಬೇತಿ ಹಾಗೂ ಸಿದ್ಧತೆಗಳು ನಡೆಯಲಿವೆ. ಜೂ.30 ರಿಂದ ಜುಲೈ 29 ರ ಅವಧಿಯಲ್ಲಿ ಬಿಎಲ್‌ಒಗಳು ಪ್ರತಿಯೊಂದು ಮನೆಗೂ ಒಟ್ಟು 3 ಬಾರಿ ಭೇಟಿ ನೀಡಿ, ಪರಿಶೀಲನಾ ಪಟ್ಟಿ ನೀಡಿ ಮತದಾರರಿಂದ ಸಹಿ ಪಡೆಯಲಿದ್ದಾರೆ. ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಸೆಪ್ಟೆಂಬರ್ 4 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ಅಕ್ಟೋಬರ್ 7 ರಂದು ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ ಎಂದರು.