ಗ್ರಾಹಕರ ಹಕ್ಕುಗಳ ಅರಿವು ಅಗತ್ಯ

ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಮತ್ತು ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ನ್ಯಾಯಧೀಶ ಎನ್.ಸುಬ್ರಹ್ಮಣ್ಯ ಉದ್ಘಾಟಿಸಿ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಎಎಸ್ಪಿ ಮಂಜುನಾಥ ಇತರರಿದ್ದರು.
ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಮತ್ತು ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ನ್ಯಾಯಧೀಶ ಎನ್.ಸುಬ್ರಹ್ಮಣ್ಯ ಉದ್ಘಾಟಿಸಿ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಎಎಸ್ಪಿ ಮಂಜುನಾಥ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಾನವ ಹಕ್ಕುಗಳ ದಿನಾಚರಣೆಯಲ್ಲಿ ನ್ಯಾಯಾಧೀಶ ಎನ್.ಸುಬ್ರಹ್ಮಣ್ಯ ಸೂಚನೆ
ಹೊಸಪೇಟೆ: ದೇಶದಲ್ಲಿ ಗ್ರಾಹಕರ ಹಿತಾಸಕ್ತಿ ಕಾಪಾಡಲು ಮತ್ತು ವಂಚನೆಗಳನ್ನು ತಡೆಯಲು ಭಾರತದ ಕಾನೂನು ವ್ಯವಸ್ಥೆಯಲ್ಲಿ ಅನೇಕ ಗ್ರಾಹಕರ ಹಕ್ಕುಗಳಿದ್ದು ಅವುಗಳ ಬಗ್ಗೆ ಪ್ರತಿಯೊಬ್ಬ ಗ್ರಾಹಕರು ಸಹ ತಿಳಿದುಕೊಳ್ಳವುದು ಅವಶ್ಯಕವಾಗಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶ ಎನ್.ಸುಬ್ರಹ್ಮಣ್ಯ ಹೇಳಿದರು.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಮತ್ತು ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಂಗಳವಾರ ಮಾತನಾಡಿದರು.
ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸಲು 1986 ಮೊದಲ ಪ್ರಬಲ ಕಾನೂನು ಗ್ರಾಹಕ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆಯು ಮೂರು ಹಂತದ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿದ್ದು, ಗ್ರಾಹಕರಿಗೆ ಸರಕು ಮತ್ತು ಸೇವೆಗಳಲ್ಲಿ ವಂಚನೆಯಾದಲ್ಲಿ ವೇದಿಕೆಗಳಿಗೆ ದೂರು ಸಲ್ಲಿಸಿ ಪರಿಹಾರವನ್ನು ಪಡೆಯಬಹುದು. ಆನ್ ಲೈನ್ ವಹಿವಾಟುಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದ್ದು ಇದರಲ್ಲಿ ವಂಚನೆಯಾದರೆ ಗ್ರಾಹಕರು ದೂರು ಸಲ್ಲಿಸಬಹುದು. ರೈತರು ಸಹ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸೇರಿ ಇತರೆ ಸರಕುಗಳಲ್ಲಿ ವಂಚನೆಯಾದಲ್ಲಿ ಅವರು ಗ್ರಾಹಕರ ವೇದಿಕೆಯಲ್ಲಿ ದೂರುಗಳನ್ನು ಸಲ್ಲಿಸಬಹುದು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಎಎಸ್ಪಿ ಮಂಜುನಾಥ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ರಿಯಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಮನೋಜ್ ಕುಮಾರ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಶ್ರೀನಿವಾಸಮೂರ್ತಿ, ವಕೀಲರಾದ ಜಂಬಣ್ಣ, ಎ.ಕರುಣನಿಧಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net