ಬ್ಯಾಂಕ್ ಗಳು ಭದ್ರತೆಯಲ್ಲಿ ನಿರ್ಲಕ್ಷ್ಯ ವಹಿಸದಿರಿ

ಹೊಸಪೇಟೆ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಬ್ಯಾಂಕ್ ಮತ್ತು ಎಟಿಎಂಗಳ ಸುರಕ್ಷತಾ ಕ್ರಮಗಳ ಕುರಿತ ಪೊಲೀಸ್ - ಬ್ಯಾಂಕ್ ಅಧಿಕಾರಿಗಳ ಸಮನ್ವಯ ಸಭೆ ನಡೆಯಿತು. ಲೀಡ್ ಬ್ಯಾಂಕ್‌ನ ವ್ಯವಸ್ಥಟಪಕ ವೀರೇಂದ್ರ ಕುಮಾರ್, ಎಎಸ್ಪಿ ಮಂಜುನಾಥ, ಡಿವೈಎಸ್ಪಿ ಪಿ.ಮುರಳಿಧರ್ ಇದ್ದರು.
ಹೊಸಪೇಟೆ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಬ್ಯಾಂಕ್ ಮತ್ತು ಎಟಿಎಂಗಳ ಸುರಕ್ಷತಾ ಕ್ರಮಗಳ ಕುರಿತ ಪೊಲೀಸ್ - ಬ್ಯಾಂಕ್ ಅಧಿಕಾರಿಗಳ ಸಮನ್ವಯ ಸಭೆ ನಡೆಯಿತು. ಲೀಡ್ ಬ್ಯಾಂಕ್‌ನ ವ್ಯವಸ್ಥಟಪಕ ವೀರೇಂದ್ರ ಕುಮಾರ್, ಎಎಸ್ಪಿ ಮಂಜುನಾಥ, ಡಿವೈಎಸ್ಪಿ ಪಿ.ಮುರಳಿಧರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಎಸ್ಪಿ ಎಸ್.ಜಾಹ್ನವಿ ಬ್ಯಾಂಕ್ ಅಧಿಕಾರಿಗಳಿಗೆ ಖಡಕ್ ಸೂಚನೆ
ಹೊಸಪೇಟೆ: ಬ್ಯಾಂಕ್ ಮತ್ತು ಎಟಿಎಂ ಕೇಂದ್ರಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಸ್ಪಿ ಎಸ್.ಜಾಹ್ನವಿ ಬ್ಯಾಂಕ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಬ್ಯಾಂಕ್ ಮತ್ತು ಎಟಿಎಂಗಳ ಸುರಕ್ಷತಾ ಕ್ರಮಗಳ ಕುರಿತ ಪೊಲೀಸ್ - ಬ್ಯಾಂಕ್ ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ಮಾತನಾಡಿದರು.
ಸಾರ್ವಜನಿಕರ ಹಣದ ಭದ್ರತೆ ಮತ್ತು ಬ್ಯಾಂಕಿAಗ್ ವ್ಯವಸ್ಥೆಯ ಸುರಕ್ಷತೆ ಅತ್ಯಂತ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮತ್ತು ಬ್ಯಾಂಕ್‌ಗಳು ಸಮನ್ವಯತೆಯಿಂದ ಕೆಲಸ ಮಾಡಬೇಕಿದೆ. ಪ್ರತಿಯೊಂದು ಬ್ಯಾಂಕ್ ಮತ್ತು ಎಟಿಎಂ ಕೇಂದ್ರಗಳಲ್ಲಿ ಕಡ್ಡಾಯವಾಗಿ ಹಗಲು ಮತ್ತು ರಾತ್ರಿ ಸ್ಪಷ್ಟವಾಗಿ ಚಿತ್ರೀಕರಣವಾಗುವ ಉತ್ತಮ ಗುಣಮಟ್ಟದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಇವುಗಳ ಬ್ಯಾಕಪ್ ವ್ಯವಸ್ಥೆ ಸಮರ್ಪಕವಾಗಿರಬೇಕು. ಎಟಿಎಂ ಕೇಂದ್ರಗಳಿಗೆ ಕಡ್ಡಾಯವಾಗಿ ನುರಿತ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಬೇಕು.
ಬ್ಯಾಂಕ್ ಹಾಗೂ ಎಟಿಎಂಗಳಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ತಕ್ಷಣವೇ ಪೊಲೀಸ್ ನಿಯಂತ್ರಣ ಕೊಠಡಿಗೆ ಸಂದೇಶ ರವಾನೆಯಾಗುವಂತಹ ಸೈರನ್ ಅಥವಾ ಆಟೋಮ್ಯಾಟಿಕ್ ಅಲಾರಾಂ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು. ಬ್ಯಾಂಕ್ ಮುಂಭಾಗ ಅಥವಾ ಎಟಿಎಂ ಕೇಂದ್ರಗಳ ಸುತ್ತಮುತ್ತ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬAದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು. ಬ್ಯಾಂಕುಗಳು ಕೇವಲ ತಾಂತ್ರಿಕವಾಗಿ ಅಪ್‌ಡೇಟ್ ಆದರೆ ಸಾಲದು, ಭೌತಿಕ ಭದ್ರತೆಯ ಕಡೆಗೂ ಅಷ್ಟೇ ಗಮನ ಹರಿಸಬೇಕು. ನಿಯಮ ಉಲ್ಲಂಘಿಸುವ ಅಥವಾ ಸುರಕ್ಷತೆಯಲ್ಲಿ ನಿರ್ಲಕ್ಷ್ಯ ತೋರುವ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net