ವಿಜಯನಗರ ಉಸ್ತುವಾರಿ ನನ್ನ ಪರ‍್ವಜನ್ಮದ ಪುಣ್ಯ

ಸಚಿವ ಕೆ.ಎಸ್. ಬಸವಂತಪ್ಪ
ಸಚಿವ ಕೆ.ಎಸ್. ಬಸವಂತಪ್ಪ
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ರ‍್ಷ ವ್ಯಕ್ತ
ಹೊಸಪೇಟೆ: ನೂತನ ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿ ಸ್ವಾತಂತ್ರ‍್ಯೋತ್ಸವದ ಧ್ವಜಾರೋಹಣ ನೆರವೇರಿಸಿರುವುದು ಸಂತೋಷವಾಗಿದೆ ಎಂದು ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಎಂದರು.
ಸ್ವಾತಂತ್ರ‍್ಯ ದಿನಾಚರಣೆ ನಿಮಿತ್ತ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಐತಿಹಾಸಿಕ ವಿಜಯನಗರ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಿರುವುದು ನನ್ನ ಯಾವ ಜನ್ಮದ ಪುಣ್ಯವೋ ಗೊತ್ತಿಲ್ಲ, ಇದು ನನಗೆ ಅತ್ಯಂತ
ಸಂತಸ ತಂದಿದೆ ಎಂದು ರ‍್ಷ ವ್ಯಕ್ತಪಡಿಸಿದರು.
ಆಸ್ಪತ್ರೆ ನರ‍್ಮಾಣಕ್ಕೆ ಮೊದಲ ಆದ್ಯತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನ್ನ ಮೇಲೆ ವಿಶ್ವಾಸವಿಟ್ಟು ಈ ಮಹತ್ವದ ಜವಾಬ್ದಾರಿ ನೀಡಿದ್ದಾರೆ. ಹೊಸ ಜಿಲ್ಲೆ ಉದಯವಾದಾಗ ನೂರೆಂಟು ಸಮಸ್ಯೆಗಳು ಇರುವುದು ಸಹಜ. ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಹಂತ-ಹಂತವಾಗಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ವಿಶೇಷವಾಗಿ ಸರ‍್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಸುಸಜ್ಜಿತ ಆಸ್ಪತ್ರೆ ಆರಂಭಿಸುವುದು ನನ್ನ ಪ್ರಥಮ ಆದ್ಯತೆಯಾಗಿದೆ ಎಂದು ಹೇಳಿದರು.
ಇದೇ ವೇಳೆ, ನವೆಂಬರ್‌ನಲ್ಲಿ ಆಯೋಜಿಸಬೇಕಿರುವ ಹಂಪಿ ಉತ್ಸವದ ಕುರಿತು ಪ್ರಸ್ತಾಪಿಸಿದ ಸಚಿವರು, ಮೈಸೂರು ದಸರಾ ಮಾದರಿಯಲ್ಲೇ ಅದ್ಧೂರಿಯಾಗಿ ಹಂಪಿ ಉತ್ಸವ ಆಚರಿಸಲು ಮುಖ್ಯಮಂತ್ರಿಗಳೊಂದಿಗೆ ರ‍್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net