ಹೂವಿನಹಡಗಲಿ : ತಾಲೂಕಿನ ಮದಲಗಟ್ಟಿಯ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮದ ನಿವಾಸಿ ಜೀವನ್ (16) ಮೃತ ಬಾಲಕ. ಶನಿವಾರ ಮದಲಗಟ್ಟಿಯ ಆಂಜನೇಯ ಸ್ವಾಮಿಯ ದರ್ಶನಕ್ಕೆ ಜೀವನ್ ಕುಟುಂಬಸ್ಥರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಜೀವನ್ ನದಿಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿದ್ದಾರೆ.
ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದರೂ, ಫಲಸಲಿಲ್ಲ. ನಂತರ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಕಾರ್ಯಾಚರಣೆ ನಡೆದ ಜೀವನ್ ಅವರ ಶವವನ್ನು ಹೊರತೆಗೆದಿದ್ದಾರೆ. ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.