ಹೊಸಪೇಟೆ: ಕಾರ್ಮಿಕರ ಭವನ ನಿರ್ಮಾಣ ಮಾಡುವಂತೆ ತಾಲೂಕು ಕಟ್ಟಡ ಕಾರ್ಮಿಕರ ಸಂಘದಿಂದ ನಗರದಲ್ಲಿ ಶಾಸಕ ಎಚ್.ಆರ್.ಗವಿಯಪ್ಪ ಮನವಿ ಸಲ್ಲಿಸಲಾಯಿತು.
ನಗರದಲ್ಲಿ ಸಾವಿರಾರು ಸಂಖ್ಯೆಯಲ್ಲಿರುವ ಕಟ್ಟಡ ಕಾರ್ಮಿಕರಿಗೆ ಸಭೆ-ಸಮಾರಂಭಗಳನ್ನು ನಡೆಸಲು, ಕಾರ್ಮಿಕರಿಗೆ ಅಗತ್ಯ ತರಬೇತಿ ನೀಡಲು ಹಾಗೂ ಕಾರ್ಮಿಕರ ಹಿತರಕ್ಷಣೆಗಾಗಿ ಪ್ರತ್ಯೇಕವಾದ ಭವನದ ಅಗತ್ಯವಿದೆ. ಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಮತ್ತು ಅವರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಒಂದು ಸುಸಜ್ಜಿತ ಭವನ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ಶಾಸಕ ಎಚ್.ಆರ್.ಗವಿಯಪ್ಪ ಮಾತನಾಡಿ, ಕಟ್ಟಡ ಕಾರ್ಮಿಕರು ಸಮಾಜದ ಬೆನ್ನೆಲುಬಾಗಿದ್ದಾರೆ. ಅವರ ಕ್ಷೇಮಾಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಗರದಲ್ಲಿ ಕಟ್ಟಡ ಕಾರ್ಮಿಕರ ಭವನ ನಿರ್ಮಿಸಲು ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸಿ, ಶೀಘ್ರದಲ್ಲೇ ಭವನ ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಗೌರವ ಅಧ್ಯಕ್ಷ ಜಿ.ಮೋಹನ್, ಅಧ್ಯಕ್ಷ ಮೌಲಾ ಸಹೇಬ್, ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಬಣ್ಣದಮನೆ, ಪ್ರಮುಖರಾದ ಬಸವರಾಜ್, ಧರ್ಮಪ್ಪ, ಸಿ.ಎಸ್.ಮಣಿ, ತಿರುಮಲ, ಸುಬ್ರಮಣ್ಯ, ಬಾಲರಾಜ್, ಶಾಷು, ನಾಗರಾಜ್, ಅಹಮದ್, ಮಾರಿಮುತ್ತು, ಜೈರುದ್ಧಿನ್, ಗಿರೀಶ್ ಇತರರಿದ್ದರು.
ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಗೌರವ ಅಧ್ಯಕ್ಷ ಜಿ.ಮೋಹನ್, ಅಧ್ಯಕ್ಷ ಮೌಲಾ ಸಹೇಬ್, ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಬಣ್ಣದಮನೆ ಇತರರಿದ್ದರು.