ಗುಣಮಟ್ಟ ಖಾತರಿ ಪಡಿಸಿಕೊಂಡು ಉತ್ಪನ್ನ ಖರೀದಿಸಿ

ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಉದ್ಘಾಟಿಸಿದರು. ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷ ಎನ್.ತಿಪ್ಪೇಸ್ವಾಮಿ, ಆಹಾರ ಇಲಾಖೆ ಉಪನಿರ್ದೇಶಕ ರಿಯಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಮನೋಜ್ ಕುಮಾರ್ ಇತರರಿದ್ದರು.
ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಉದ್ಘಾಟಿಸಿದರು. ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷ ಎನ್.ತಿಪ್ಪೇಸ್ವಾಮಿ, ಆಹಾರ ಇಲಾಖೆ ಉಪನಿರ್ದೇಶಕ ರಿಯಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಮನೋಜ್ ಕುಮಾರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಸಲಹೆ

ಹೊಸಪೇಟೆ: ಗ್ರಾಹಕರು ಯಾವುದೇ ರೀತಿಯ ಉತ್ಪನ್ನ ಖರೀದಿಸಬೇಕಾದರೆ ಉತ್ಪನ್ನದ ಪ್ರಮಾಣ ಮತ್ತು ಗುಣಮಟ್ಟ ಖಾತರಿ ಪಡಿಸಿಕೊಂಡು ಖರೀದಿಸಬೇಕು ಎಂದು ಅಪರ ಜಿಲ್ಲಾಧಿಕಾರಿ .ಬಾಲಕೃಷ್ಣ ಹೇಳಿದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತಾ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬ ಗ್ರಾಹಕನೂ ತಾನು ಖರೀದಿಸುವ ವಸ್ತುಗಳ ಗುಣಮಟ್ಟ, ತೂಕ ಮತ್ತು ಅಳತೆ ಪ್ರಮಾಣದ ಬಗ್ಗೆ ಅರಿತಿರಬೇಕು. ಗ್ರಾಹಕನೇ ಮಾರುಕಟ್ಟೆಯ ರಾಜ ಎನ್ನುವ ಮಾತು ಅನ್ವಯವಾಗಬೇಕಾದರೆ, ಗ್ರಾಹಕರು ಸಹ ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿರಬೇಕು. ಗ್ರಾಹಕರು ವಿವಿಧ ಮಾಧ್ಯಮಗಳಲ್ಲಿ ಬಿತ್ತರಿಸುವ ಆಕರ್ಷಣೀಯ ಜಾಹೀರಾತುಗಳಿಗೆ ಮಾರು ಹೋಗಿ ಉತ್ಪನ್ನ ಖರೀದಿಸಬಾರದು. ಬದಲಾಗಿ ಉತ್ಪನ್ನದ ಗುಣಮಟ್ಟ, ಸುರಕ್ಷತೆಯ ಬಗ್ಗೆ ಪರಿಶೀಲಿಸಿ ಖರೀದಿಸಬೇಕು. ಯಾವುದೇ ವಸ್ತು, ಉತ್ಪನ್ನ ಖರೀದಿಸಿದಾಗ ತಪ್ಪದೇ ಅಧಿಕೃತ ಬಿಲ್ ಅಥವಾ ರಶೀದಿ ಪಡೆಯಬೇಕು. ಉತ್ಪನ್ನ ಖರೀದಿಸಿದಾಗ ಲೋಪದೋಷ ಉಂಟಾದಾಗ ದೂರು ದಾಖಲಿಸಲು ಅಥವಾ ಗ್ರಾಹಕರ ಹಕ್ಕು ಪ್ರತಿಪಾದಿಸಲು ಸಹಕಾರಿಯಾಗಲಿದೆ. ವ್ಯಾಪಾರಸ್ಥರು ಕಡ್ಡಾಯವಾಗಿ ಮುದ್ರೆ ಹಾಕಿಸಿದ ಎಲೆಕ್ಟ್ರಾನಿಕ್ ತೂಕದ ಯಂತ್ರಗಳನ್ನೇ ಬಳಸಬೇಕು. ಗ್ರಾಹಕರಿಗೆ ಬಗ್ಗೆ ಅನುಮಾನವಿದ್ದಲ್ಲಿ ತಕ್ಷಣ ಸಂಬAಧಪಟ್ಟ ಇಲಾಖೆಗೆ ದೂರು ನೀಡಬಹುದು. ವಸ್ತು ಅಥವಾ ಸೇವೆಯಲ್ಲಿ ನ್ಯೂನತೆ ಕಂಡುಬAದಲ್ಲಿ ಗ್ರಾಹಕರು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿ . ಕಾನೂನಾತ್ಮಕವಾಗಿ ನ್ಯಾಯ ಪಡೆಯಲು ಅವಕಾಶವಿದೆ ಎಂದರು.

ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷ ಎನ್.ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಆಹಾರ ಇಲಾಖೆ ಉಪನಿರ್ದೇಶಕ ರಿಯಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಮನೋಜ್ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಗುಜ್ಜಲ ನಾಗರಾಜ್, ಕಾರ್ಯದರ್ಶಿ ಕೃಷ್ಣದೇವರಾಯಲು, ವಕೀಲ ಕರುಣಾನಿಧಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net