ಗ್ರಾಮೀಣ ರಸ್ತೆಗಳ ದುರಸ್ತಿ ಕೈಗೊಳ್ಳಿ

ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮೀಣ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ತಹಸೀಲ್ದಾರ್ ಆರ್.ಕವಿತಾಗೆ ರಾಜ್ಯ ರೈತ ಸಂಘದಿಂದ ಮನವಿ ಸಲ್ಲಿಸಲಾಯಿತು.
ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮೀಣ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ತಹಸೀಲ್ದಾರ್ ಆರ್.ಕವಿತಾಗೆ ರಾಜ್ಯ ರೈತ ಸಂಘದಿಂದ ಮನವಿ ಸಲ್ಲಿಸಲಾಯಿತು.
Published on
ಹಗರಿಬೊಮ್ಮನಹಳ್ಳಿ: ಪಟ್ಟಣದಿಂದ ಗ್ರಾಮೀಣ ಭಾಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಹಸೀಲ್ದಾರ್ ಆರ್.ಕವಿತಾಗೆ ರಾಜ್ಯ ರೈತ ಸಂಘದಿಂದ ಗುರುವಾರ ಮನವಿ ಸಲ್ಲಿಸಲಾಯಿತು.
ಸಂಘದ ರಾಜ್ಯ ಕಾರ್ಯಾಧ್ಯಕ್ಷ ಜೆ.ಎಂ.ವೀರಸಂಗಯ್ಯ ಮಾತನಾಡಿ, ಗ್ರಾಮೀಣ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಜನರು ಓಡಾಡುವುದು ಕಷ್ಟವಾಗಿದೆ. ಸಂಬಂಧಪಟ್ಟ ಇಲಾಖೆ, ತಾಲೂಕು ಆಡಳಿತ ಮತ್ತು ಕ್ಷೇತ್ರದ ಶಾಸಕ ಕಾಳಜಿ ತೋರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಹೊಸಪೇಟೆ-ಹರಿಹರ ರಾಜ್ಯ ಹೆದ್ದಾರಿ ಸಂಪೂರ್ಣ ಹಾಳಾಗಿದ್ದು, ಇತ್ತೀಚಿಗೆ ಪಿಂಜಾರುಹೆಗ್ಡಾಳು ಗ್ರಾಮದ ಬಳಿ ನಡೆದ ಭೀಕರ ಅಪಘಾತ ಎಚ್ಚರಿಕೆಯ ಗಂಟೆಯಾಗಿದೆ. ಬಹುತೇಕ ಗ್ರಾಮೀಣ ರಸ್ತೆಗಳಲ್ಲಿ ದ್ವಿಚಕ್ರ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವಂತ ಪರಿಸ್ಥಿತಿ ಬಂದೊದಗಿದೆ ಎಂದು ದೂರಿದರು. ಎಲ್ಲ ರಸ್ತೆಗಳ ದುರಸ್ತಿ ಕಾರ್ಯವನ್ನು ಒಂದು ವಾರದೊಳಗೆ ಆರಂಭಿಸಬೇಕು ಎಂದು ಆಗ್ರಹಿಸಿದರು.
ತಾಲೂಕು ಅಧ್ಯಕ್ಷ ಬಸವನಗೌಡ, ಜಿಲ್ಲಾಧ್ಯಕ್ಷ ಆಂಜನೇಯಲು, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಗೋಣಿಬಸಪ್ಪ, ಸಲಹಾ ಸಮಿತಿ ಸದಸ್ಯ ಹುರಕಡ್ಲಿ ಶಿವಕುಮಾರ್, ಯುವ ಘಟಕದ ಜಿಲ್ಲಾಧ್ಯಕ್ಷ ರವಿಕುಮಾರ್ ತಂಬ್ರಹಳ್ಳಿ, ತಾಲೂಕು ಪ್ರಧಾನ ಕಾರ್ಯದರ್ಶಿ ಎ.ನಾಗರಾಜ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net