

ಪ್ರಮುಖ ಮುಖ್ಯಾಂಶಗಳು
ಹೊಸಪೇಟೆ: ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಏ.20 ರಂದು ವಿಜೃಂಭಣೆಯಿAದ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ವಿಶ್ವಗುರು ಸಾಂಸ್ಕೃತಿಕ ಜಯಂತಿಯನ್ನು ಸಂಭ್ರಮದಿAದ ವಿಜೃಂಭಣೆಯಿAದ ಆಚರಿಸಲಾಗುಗವುದು. ಅಂದು ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಕೊಟ್ಟೂರ ಮಠದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು. ಜಯಂತಿ ಸರ್ಕಾರದ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ನಗರದ ಪ್ರಮುಖ ವೃತ್ತಗಳು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಬಸವಣ್ಣನವ ತತ್ವದಾರ್ಶಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸಲು ಉಪನ್ಯಾಸ ಆಯೋಜಿಸಬೇಕು ಎಂದು ತಿಳಿಸಿದರು.
ಜಯಂತಿ ನಿಮಿತ್ತ ಬೃಹತ್ ಮೆರವಣಿಗೆ ಕಾರ್ಯ ಹಮ್ಮಿಕೊಂಡಿದ್ದು, ಸಣ್ಣಕ್ಕಿ ವೀರಭದ್ರೇಶ್ವರ ದೇಗುಲದಿಂದ ಆರಂಭವಾದ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊಟ್ಟೂರು ಮಠದ ಹತ್ತಿರ ಮುಕ್ತಾಯಗೊಳ್ಳಲಿದೆ. ಈ ವೇಳೆ ಯಾವುದೇ ಘರ್ಷಣೆ ಆಗದಂತೆ ಶಾಂತಿಯುತವಾಗಿ ಮತ್ತು ಸೌಹಾರ್ದಯುತವಾಗಿ ನಡೆಸಲು ಪ್ರತಿಯೊಬ್ಬರು ಸಹಕರಿಸಬೇಕು ಎಂದರು.