ಮಹನೀಯರ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ

ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ವಿವಿಧ ಜಯಂತಿಗಳ ಪೂರ್ವಭಾವಿ ಸಭೆ ನಡೆಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ ಇದ್ದರು.
ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ವಿವಿಧ ಜಯಂತಿಗಳ ಪೂರ್ವಭಾವಿ ಸಭೆ ನಡೆಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಸೂಚನೆ
ಹೊಸಪೇಟೆ: ಜಿಲ್ಲಾ ಕೇಂದ್ರದಲ್ಲಿ ಸರ್ಕಾರದಿಂದ ಮಾ.23ರಂದು ದೇವರದಾಸಿಮಯ್ಯ ಜಯಂತಿ, ಮಾ.28ರಂದು ಅಗ್ನಿಬನ್ನಿರಾಯ ಜಯಂತಿ ಹಾಗೂ ಮಾ.31ರಂದು ಮಹಾವೀರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ವಿವಿಧ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ನಗರದಲ್ಲಿ ಅರ್ಥಪೂರ್ಣ ಹಾಗೂ ವಿಜೃಂಭಣೆಯಿAದ ಆಚರಿಸಲು ತೀರ್ಮಾನಿಸಿದ್ದು, ಸ್ಥಳ ಮತ್ತು ದಾಸಿಮಯ್ಯನವರ ಕುರಿತು ಸಂದೇಶ ನೀಡಲು ಉಪನ್ಯಾಸಕರ ಆಯ್ಕೆ ಬಗ್ಗೆ ಚರ್ಚಿಸಿ ತಿಳಿಸಲಾಗುವುದು. ಮಾ.28 ರಂದು ಅಗ್ನಿ ಬನ್ನಿರಾಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅರ್ಥಪೂರ್ಣ ಹಾಗೂ ಸೌಹಾರ್ದಯುತವಾಗಿ ಆಚರಿಸಲಾಗುತ್ತದೆ. ಹಾಗೆಯೇ ಮಾ.31 ರಂದು ಶ್ರೀ ಮಹಾವೀರ ಜಯಂತಿಯನ್ನು ನಗರದ ಬಳ್ಳಾರಿ ರಸ್ತೆಯ ಜೆ.ಪಿ.ನಗರದಲ್ಲಿನ ಶ್ರೀ ಪಾರ್ಶ್ವನಾಥ ದಿಗಂಬರ ಜೈನ ಮಂದಿರದಲ್ಲಿ ಆಚರಿಸಲಾಗುವುದು.
ಜಯಂತಿ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ವಿವಿಧ ಕಲಾ ತಂಡಗಳೊAದಿಗೆ ವಿಜೃಂಭಣೆ ಮೆರವಣಿಗೆ ನಡೆಸಲಾಗುತ್ತದೆ. ಸರ್ಕಾರದ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಎಲ್ಲಾ ಜನಪ್ರತಿನಿಧಿಗಳನ್ನು ಮತ್ತು ಗಣ್ಯರನ್ನು ಆಹ್ವಾನಿಸಬೇಕು. ಮಹನೀಯರ ತತ್ವ ಆದರ್ಶಗಳನ್ನು ಇಂದಿನ ಪೀಳಿಗೆಗೆ ಮುಟ್ಟಿಸುವ ನಿಟ್ಟಿನಲ್ಲಿ ಮಹನೀಯರ ಕುರಿತು ಗೀತಗಾಯನ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net