ಸಂಭ್ರಮದ ಆಚರಣೆ ನಮ್ಮೆಲ್ಲರ ಕರ್ತವ್ಯ

ಕೂಡ್ಲಿಗಿಯಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು.
ಕೂಡ್ಲಿಗಿಯಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು.
Published on
ಕೂಡ್ಲಿಗಿ: ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಹಬ್ಬದ ರೀತಿಯಲ್ಲಿ ಆಚರಿಸಿ ಸಂಭ್ರಮಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನಡೆಸಲಾಗುವುದು. ನಂತರ ಪೊಲೀಸ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಲಾಗುವುದು. ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಭಾಗವಹಿಸುವ ಎಲ್ಲ ತಂಡಗಳಿಗೂ ಬಹುಮಾನ ನೀಡಲಾಗುವುದು. ಗಣರಾಜ್ಯೋತ್ಸವ ದಿನ ಎಲ್ಲ ಶಾಲೆ, ಕಾಲೇಜುಗಳಲ್ಲಿ ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಭಾವಚಿತ್ರ ಇರಿಸಿ ಪೂಜೆ ಸಲ್ಲಿಸುವುದು ಕಡ್ಡಾಯವಾಗಿದೆ. ಈ ಬಗ್ಗೆ ಶಾಲೆ, ಕಾಲೇಜುಗಳಿಗೆ ಮಾಹಿತಿ ನೀಡಿ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಎಸ್.ಜಗದೀಶ್‌ಗೆ ಶಾಸಕರು ಸೂಚಿಸಿದರು.
ತಹಸೀಲ್ದಾರ್ ವಿ.ಕೆ.ನೇತ್ರಾವತಿ, ತಾಪಂ ಇಒ ನರಸಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ಪಪಂ ಮಾಜಿ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನಗೌಡ, ಪ್ರಮುಖರಾದ ಹಿರೇಕುಂಬಳಗುಂಟೆ ಉಮೇಶ್, ಬ್ಯಾಳಿ ವಿಜಯಕುಮಾರ್ ಗೌಡ, ಕಾಟೇರ ಹಾಲೇಶ್, ಎಸ್.ದುರುಗೇಶ್, ಬಂಡೆ ರಾಘವೇಂದ್ರ, ಡಿ.ಎಚ್.ದುರುಗೇಶ್, ಪರಶುರಾಮ, ಗೆದ್ದಲಗಟ್ಟೆ ಹನುಮೇಶ್, ಮಹೇಶ್, ಸಿ.ಮಾರಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net