ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟ

ಅಶೋಕ್ ಬಿ. ನಾಯ್ಕ
ಅಶೋಕ್ ಬಿ. ನಾಯ್ಕ
Published on

ಪ್ರಮುಖ ಮುಖ್ಯಾಂಶಗಳು

  • ಛಾತ್ರೋನ್ ಕಿ ಗೂಂಜ್ ಅಭಿಯಾನದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬಿ. ನಾಯ್ಕ ಆಗ್ರಹ
ಹೊಸಪೇಟೆ: ಕೇಂದ್ರ ಸರ್ಕಾರದ ಯುವ ವಿರೋಧಿ ನೀತಿ ಹಾಗೂ ನೀಟ್ ಪರೀಕ್ಷೆಯಲ್ಲಾಗಿರುವ ಅಕ್ರಮಗಳನ್ನು ಖಂಡಿಸಿ, ವಿಜಯನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಛಾತ್ರೋನ್ ಕಿ ಗೂಂಜ್ ಅಭಿಯಾನ ನಡೆಯಿತು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬಿ. ನಾಯ್ಕ ಮಾತನಾಡಿ, ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ. ನೀಟ್ ಅಕ್ರಮದಿಂದಾಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡಬೇಕು. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣವೇ ರಾಜೀನಾಮೆ ನೀಡಬೇಕು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಗತ್ಯವಿದ್ದರೆ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ಎಐಸಿಸಿ ಯುವ ಕಾಂಗ್ರೆಸ್ ಕಾರ್ಯದರ್ಶಿ ರವೀಂದ್ರ ದಾಸ್, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಸಿದ್ದು ಹಳ್ಳಿಗೌಡ, ಕೆಪಿಸಿಸಿ ಕಾರ್ಯದರ್ಶಿ ಅಬುತಾ ತಾಹಿರ್ ಪಟೇಲ್, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ವಕ್ತಾರ ಗಣೇಶ್ ಪಾಟೀಲ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net