ಗ್ರಾಮದಿಂದ ತಾಲೂಕು ಕೇಂದ್ರಕ್ಕೆ ವಿದ್ಯಾಭ್ಯಾಸ, ಚಿಕಿತ್ಸೆ ಸೇರಿದಂತೆ ಇತರ ಸೌಲಭ್ಯಗಳನ್ನು ಪಡೆಯಲು ನಿತ್ಯ ನೂರಾರು ಗ್ರಾಮಸ್ಥರು ಸಂಚರಿಸುತ್ತಿದ್ದು, ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ತೊಂದರೆಯಾಗುತ್ತಿದೆ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಎರಡು ತಿಂಗಳು ಕಳೆದರೂ ಪೂರ್ಣಗೊಂಡಿಲ್ಲ. ಕೂಡಲೇ ರಸ್ತೆ ಅಭಿವೃದ್ಧಿ ಮಾಡದಿದ್ದರೆ ರಸ್ತೆ ಸಂಚಾರ ತಡೆದು ಹಾಲಿ ಹಾಗೂ ಮಾಜಿ ಶಾಸಕರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರಾದ ವಿ.ಬಿ.ಮಲ್ಲಪ್ಪ, ಕೊಟ್ರೇಶ್, ಮಲ್ಲನಗೌಡ ಇತರರು ತಿಳಿಸಿದ್ದಾರೆ.