ಬಸ್ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಿ

ಕಮಲಾಪುರದ ಹೊಸ ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಿದರು. ಅಧ್ಯಕ್ಷ ಈ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಗಳಾದ ಡಿ.ಪಂಚಾಕ್ಷರಿ, ಎಂ.ಮಣಿಕAಠ, ಪ್ರಮುಖರಾದ ಮದುರಚನ್ನಶಾಸ್ತ್ರಿ, ಎಂ.ಈರಣ್ಣ, ಜಗದೀಶ ಇತರರಿದ್ದರು.
ಕಮಲಾಪುರದ ಹೊಸ ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಿದರು. ಅಧ್ಯಕ್ಷ ಈ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಗಳಾದ ಡಿ.ಪಂಚಾಕ್ಷರಿ, ಎಂ.ಮಣಿಕAಠ, ಪ್ರಮುಖರಾದ ಮದುರಚನ್ನಶಾಸ್ತ್ರಿ, ಎಂ.ಈರಣ್ಣ, ಜಗದೀಶ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಿಜೆಪಿ ಕಮಲಾಪುರ ಮಹಾಶಕ್ತಿ ಕೇಂದ್ರದಿAದ ಜಿಲ್ಲಾಧಿಕಾರಿ ಮನವಿ
ಹೊಸಪೇಟೆ: ವಿಶ್ವವಿಖ್ಯಾತ ಹಂಪಿ ಪ್ರವಾಸಿ ಕ್ಷೇತ್ರದ ಸಮೀಪವಿರುವ ಕಮಲಾಪುರದಲ್ಲಿ ನಡೆಯುತ್ತಿರುವ ಹೊಸ ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಮಲಾಪುರ ಮಹಾಶಕ್ತಿ ಕೇಂದ್ರದಿAದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಸುಮಾರು ಮೂರುನಾಲ್ಕು ವರ್ಷಗಳ ಹಿಂದೆ ಹಂಪಿ ವೃತ್ತದಲ್ಲಿ ಒಂದು ಕೋಟಿ ರೂಪಾಯಿ ಅನುದಾನದಲ್ಲಿ ನೂತನ ಬಸ್ ನಿಲ್ದಾಣದ ನಿರ್ಮಾಣ ಕಾರ್ಯ ಆರಂಭಿಸಲಾಗಿತ್ತು. ಆದರೆ, ಕೆಲವೇ ದಿನಗಳಲ್ಲಿ ಕಾಮಗಾರಿ ಅನಿರೀಕ್ಷಿತವಾಗಿ ನಿಂತುಹೋಗಿದೆ. ಪರಿಣಾಮವಾಗಿ, ದಿನನಿತ್ಯ ಹಂಪಿಗೆ ಆಗಮಿಸುವ ದೇಶ-ವಿದೇಶಿ ಪ್ರವಾಸಿಗರು, ಭಕ್ತಾದಿಗಳು, ಶಾಲಾ ಮಕ್ಕಳು ಹಾಗೂ ಮಹಿಳೆಯರು ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ ಎಂದು ಆಗ್ರಹಿಸಿದರು.
ನಿಲ್ದಾಣದಲ್ಲಿ ಕುಳಿತುಕೊಳ್ಳಲು ಸೂಕ್ತ ಆಸನ, ಶೌಚಗೃಹ ಹಾಗೂ ಬೆಳಕಿನ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿದೆ. ಬಸ್ಸುಗಳು ನಿಲ್ದಾಣದ ಒಳಗೆ ಬಾರದೆ ರಸ್ತೆ ಬದಿಯಲ್ಲೇ ಪ್ರಯಾಣಿಕರನ್ನು ಇಳಿಸಿ ತೆರಳುತ್ತಿದ್ದು, ಅಪಘಾತದ ಭೀತಿ ಎದುರಾಗಿದೆ. ಪಟ್ಟಣದಲ್ಲಿ ಪ್ರವಾಸೋದ್ಯಮ, ಪುರಾತತ್ವ ಮತ್ತು ಹಂಪಿ ಪ್ರಾಧಿಕಾರದಂತಹ ಪ್ರಮುಖ ಕಚೇರಿಗಳಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರಿದಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಬಿಜೆಪಿ ಕಮಲಾಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಈ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಗಳಾದ ಡಿ.ಪಂಚಾಕ್ಷರಿ, ಎಂ.ಮಣಿಕAಠ, ಪ್ರಮುಖರಾದ ಮದುರಚನ್ನಶಾಸ್ತ್ರಿ, ಎಂ.ಈರಣ್ಣ, ಜಗದೀಶ, ಗುಂಡರಾಜ, ಹುಲಗಪ್ಪ, ಲಿಂಗಪ್ಪ, ಯಲ್ಲಪ್ಪ, ಗಂಗಾಧರ, ಕುಪೇಂದ್ತ, ಮಾಂಹಕಾಳಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net