ರೈಲ್ವೆ ಮೇಲ್ಸೇತುವೆ ತ್ವರಿತ ಪೂರ್ಣಗೊಳಿಸಿ

ಹೊಸಪೇಟೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಎಸ್ಪಿ ಎಸ್. ಜಾಹ್ನವಿ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ಆರ್‌ಟಿಒ ದಾಮೋದರ, ತಹಸೀಲ್ದಾರ್ ಶೃತಿ ಎಂ.ಮಳ್ಳಪ್ಪಗೌಡ್ರ್ ಇತರರಿದ್ದರು.
ಹೊಸಪೇಟೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಎಸ್ಪಿ ಎಸ್. ಜಾಹ್ನವಿ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ಆರ್‌ಟಿಒ ದಾಮೋದರ, ತಹಸೀಲ್ದಾರ್ ಶೃತಿ ಎಂ.ಮಳ್ಳಪ್ಪಗೌಡ್ರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ
ಹೊಸಪೇಟೆ: ನಗರದ ಅನಂತಶಯನಗುಡಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಎಲ್ಲಾ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಿಕೊಂಡು, ಮುಂಬರುವ ಆಗಸ್ಟ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಗಡುವು ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆಯ ಸಭೆಯಲ್ಲಿ ಮಾತನಾಡಿದರು.
ಮೇಲ್ಸೇತುವೆ ಕಾಮಗಾರಿ ಆರಂಭಕ್ಕೆ ಇದ್ದ ಭೂಸ್ವಾಧೀನ ಪ್ರಕ್ರಿಯೆ, ಅನುದಾನ ಬಿಡುಗಡೆ ಹಾಗೂ ತಾಂತ್ರಿಕ ಅಡಚಣೆಗಳು ಸೇರಿದಂತೆ ಎಲ್ಲಾ ರೀತಿಯ ತೊಡಕುಗಳನ್ನು ಜಿಲ್ಲಾಡಳಿತ ಈಗಾಗಲೇ ಸಂಪೂರ್ಣವಾಗಿ ನಿವಾರಿಸಿ, ಸುಗಮ ಕಾಮಗಾರಿ ಕೆಲಸಕ್ಕೆ ದಾರಿ ಮಾಡಿಕೊಟ್ಟಿದೆ. ಹೀಗಿದ್ದರೂ ಸಹ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದು ಬೇಸರದ ಸಂಗಿತಿಯಾಗಿದೆ ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳು ಮತ್ತು ಗುತ್ತಿಗೆದಾರರ ಇಂತಹ ನಿಧಾನಗತಿಯ ಧೋರಣೆ ಸಾರ್ವಜನಿಕರ ಮತ್ತು ಸ್ಥಳೀಯ ಜನಪ್ರತಿನಿಧಿಗಳ ತೀವ್ರ ಕೆಂಗಣ್ಣಿಗೆ ಗುರಿಯಾಗಿದೆ. ಹಂಪಿ ರಸ್ತೆ ಕಲ್ಯಾಣ ಕರ್ನಾಟಕದ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಮೇಲ್ಸೇತುವೆ ಕೆಲಸ ಅರ್ಧಕ್ಕೆ ನಿಂತಿರುವುದರಿAದ ಸಾವಿರಾರು ವಾಹನ ಸವಾರರು ಹಾಗೂ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಕುಂಟು ನೆಪ ಹೇಳಿದರೂ ಕೇಳುವುದಿಲ್ಲ. ಕಾಮಗಾರಿಯಲ್ಲಿ ಕಂಡುಬರುತ್ತಿರುವ ಸಣ್ಣಪುಟ್ಟ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಿಕೊಂಡು ಗುಣಮಟ್ಟದಲ್ಲಿ ರಾಜಿಯಿಲ್ಲದೇ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net