ದೆಹಲಿ ಪೊಲೀಸರ ದೌರ್ಜನ್ಯ ಖಂಡಿನೆ

ಹೊಸಪೇಟೆ ತಾಲೂಕು ಕಚೇರಿ ಎದುರು ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಪ್ರತಿಭಟನೆ ನಡೆಯಿತು. ಎಐಡಿಎಸ್ಒ ಜಿಲ್ಲಾ ಅಧ್ಯಕ್ಷ ಜೆ.ಪಿ.ರವಿಕಿರಣ್, ಜಿಲ್ಲಾ ಕಾರ್ಯದರ್ಶಿ ಯು.ಉಮಾದೇವಿ, ವಿದ್ಯಾರ್ಥಿಗಳಾದ ವೈಷ್ಣವಿ, ಸೈಯದ್ ಸಮೀರ್, ಮೀನಾಕ್ಷಿ, ನಿರ್ಮಲಾ, ಶ್ರೀನಿವಾಸ್, ಹುಲಿಗೆಮ್ಮ, ವಿದ್ಯಾಶ್ರೀ ಇತರರಿದ್ದರು.

Published on
ಹೊಸಪೇಟೆ: ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ನವದೆಹಲಿಯಲ್ಲಿ ಶಾಂತಿಯುತ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಅಮಾನುಷ ದಾಳಿಯನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ವಿಜಯನಗರ ಜಿಲ್ಲಾ ಸಮಿತಿ ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಎಐಡಿಎಸ್ಒ ಜಿಲ್ಲಾ ಅಧ್ಯಕ್ಷ ಜೆ.ಪಿ.ರವಿಕಿರಣ್ ಮಾತನಾಡಿ, ಬಡ ಮತ್ತು ಮಧ್ಯಮ ವರ್ಗದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜತೆ ಎನ್‌ಟಿಎ ಹಾಗೂ ಕೋಚಿಂಗ್ ಮಾಫಿಯಾ ಚೆಲ್ಲಾಟವಾಡುತ್ತಿವೆ. ತಮ್ಮ ಹಕ್ಕಿಗಾಗಿ ಹೋರಾಡಿದ ನಿರಾಯುಧ ವಿದ್ಯಾರ್ಥಿಗಳ ಮೇಲೆ ಲಾಟಿ ಚಾರ್ಜ್, ಅಶ್ರುವಾಯು, ಪೆಲ್ಲೆಟ್ ಗನ್ ಹಾಗೂ ಶಾಕ್ ಬಟನ್ ಬಳಸಿ ದೌರ್ಜನ್ಯ ಎಸಗಿರುವುದು ಅಕ್ಷಮ್ಯ. ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಕಾರಣರಾದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಭ್ರಷ್ಟಾಚಾರದ ಕೂಪವಾಗಿರುವ ಎನ್‌ಟಿಎ ರದ್ದುಪಡಿಸಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net